ಬೆಂಗಳೂರು:ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಡಿಸಿಎಂ ಡಿಕೆ ಶಿವಕುಮಾರ್  ಅವರು ಚಾಲನೆ ನೀಡಿದರು.
ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿಲೋಗೋ ಕೂಡ ಬಿಡುಗಡೆ ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಹಂತ ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.
ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದಿದ್ದಾರೆ.

ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದೆವು ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 17 =
Remember me
