ಬೆಂಗಳೂರು:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದು, ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ಮುಳುವಾಗುವ ಸಾಧ್ಯತೆ ಹೆಚ್ಚಿದೆ. ಪ್ರಾಸಿಕ್ಯೂಷನ್​ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಖಂಡಿಸಿದ್ದು, ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿಯ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ.
ರಾಜ್ಯಪಾಲರು ಕಾನೂನು ಬಾಹಿರವಾಗಿ ಅನುಮತಿಸಿದ್ದಾರೆ. ಅವರು ಅನುಮತಿ ನೀಡಿದ್ದು ಕೂಡ ನಿಯಮದಲ್ಲಿ ಇಲ್ಲ. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್​ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರ ಇರುವಂತಹ ಸರ್ಕಾರ. ಬಿಜೆಪಿಯವರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಅವರ ಈ ಪ್ರಯತ್ನ ಯಶಸ್ವಿಯಾಗಲ್ಲ. ನನ್ನ ತೇಜೋವಧೆ ಮಾಡುವುದು ಬಿಜೆಪಿಯವರ ಭ್ರಮೆ. ನಮ್ಮ ಅಭೂತಪೂರ್ವ ಗೆಲುವು ಅವರಿಗೆ ಸಹಿಸಲು ಆಗುತ್ತಿಲ್ಲ.
ಇದನ್ನೂ ಓದಿ:ಆತ ತಂಡದಲ್ಲಿ ಇರುತ್ತಾನೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ; ಜಯ್​ ಷಾ ಹೀಗೆನ್ನಲು ಕಾರಣವೇನು
ಟಿಬಿ ಅಬ್ರಹಾಂ ದೂರು ನೀಡಿದ ಕೆಲ ಗಂಟೆಗಳಲ್ಲೇ ನನಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್​ ನೀಡಲಾಗಿದೆ. ಲೋಕಾಯುಕ್ತದವರು ಹೆಚ್​ಡಿ ಕುಮಾರಸ್ವಾಮಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಕೋರಿದ್ದರು. ಹೆಚ್​ಡಿಕೆ ವಿರುದ್ಧ ಪ್ರಾಥಮಿಕ ತನಿಖೆಯಲ್ಲಿ ಸಾಬೀತು ಎಂದು ಮನವಿ ಮಾಡಿದ್ದರು. ಆದರೆ ಮುಡಾ ಕೇಸ್​ನಲ್ಲಿ ನನ್ನ ತನಿಖೆಯೇ ನಡೆದಿಲ್ಲ ಎಂದರು.
ಫೆಬ್ರವರಿ 26ರಂದು ಮುರುಗೇಶ್ ನಿರಾಣಿ ವಿರುದ್ಧ ಅನುಮತಿ ಕೇಳಿದ್ದರು. ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದಾರೆ. ಇವರೆಲ್ಲ ವಿರುದ್ಧ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ ಆದರೆ, ನನ್ನ ಕೇಸ್​ನಲ್ಲಿ ಆತುರವಾಗಿ ಅನುಮತಿ ಕೊಟ್ಟಿದ್ದಾರೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ನನ್ನ ಸಹಿ ಇಲ್ಲ. ನನ್ನ ತನಿಖೆಯಾಗಿ, ಏನೂ ಇಲ್ಲದೇ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ರಾಜಕೀಯಕ್ಕಾಗಿ ಅನುಮತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರೆ ಸಚಿವರಿಗೆ ಧನ್ಯವಾದ ತಿಳಿಸುತ್ತೇನೆ. ಇಡೀ ಸಚಿವ ಸಂಪುಟ ಒಕ್ಕೊರಲಿನಿಂದ ಇದನ್ನ ಖಂಡಿಸಿದೆ. ಪಕ್ಷವೂ ಕೂಡ ಇದನ್ನ ಖಂಡಿಸಿದೆ. ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರು ಖಂಡಿಸಿದ್ದಾರೆ. ಪಕ್ಷ ಹೈಕಮಾಂಡ್​ ಕೂಡ ನನಗೆ ಧೈರ್ಯ ತುಂಬಿದೆ. ನಿಮ್ಮ ಜೊತೆಗೆ ಇರುತ್ತೇವೆ ಎಂದು ಕರೆ ಮಾಡಿ ಹೇಳಿದ್ದಾರೆ. ಹಾಗಾಗಿ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಚಿವ ಸಂಪಙಉಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × four =
Remember me
