ಬೆಂಗಳೂರು:ಟೀಕಿಸುವ ಭರದಲ್ಲಿ ವೈಯಕ್ತಿಕವಾಗಿ ನಿಂದನೆ ಮಾಡಿದ ಬಳಿಕ ಕ್ಷಮೆಯಾಚಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಚಂದ್ರಕಾಂತ ಬೆಲ್ಲದ ಅವರ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.
ಅರವಿಂದ​ ಬೆಲ್ಲದ ಅವರ ಕ್ಷಮಾಪಣ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.
ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ. ಇದರ ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.
ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.
ಅರವಿಂದ ಅವರ ತಂದೆ ಚಂದ್ರಕಾಂತ ಬೆಲ್ಲದ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.
ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.
ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ…pic.twitter.com/4tmH5OpGdz
— Siddaramaiah (@siddaramaiah)September 3, 2024

ಅರವಿಂದ ಬೆಲ್ಲದ ಕ್ಷಮಾಪಣ ಪತ್ರದಲ್ಲೇನಿದೆ?ಕಳೆದ ಶನಿವಾರ (ಆ.24) ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಈ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಅರವಿಂದ ಬೆಲ್ಲದ ಅವರ ಪತ್ರದಲ್ಲಿದೆ.
ಬೇಬಿ ಬಂಪ್​ ಫೋಟೋಶೂಟ್​ನಲ್ಲಿ ಮಿಂಚಿದ ಡಿಪ್ಪಿ: ಪ್ರೀತಿಯ ಮಡದಿ ಜತೆ ಕ್ಯಾಮೆರಾಗೆ ಪೋಸ್​ ಕೊಟ್ಟ ರಣವೀರ್​

ರಾತ್ರಿ ಹೊತ್ತು ಆಗಾಗ ಟಾಯ್ಲೆಟ್​ಗೆ​ ಹೋಗುತ್ತೀರಾ? ಇದು ಕೇವಲ ಅಭ್ಯಾಸವಲ್ಲ ಒಂದು ಕಾಯಿಲೆ ಎಚ್ಚರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
