ಬೆಂಗಳೂರು:ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ (ಜೂ.20) ರಾತ್ರಿ 11.30ಕ್ಕೆ ಸಿಎಂ ಸಿದ್ದು ಪತ್ನಿ ಪಾರ್ವತಿ ಅವರು ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ದೆಹಲಿ ಪ್ರವಾಸದ ಸಮಯದಲ್ಲಿ ಕೊಂಚ ಬದಲಾವಣೆಯಾಗಿದೆ.
ಇದನ್ನೂ ಓದಿ:ಅಂತಾರಾಷ್ಟ್ರೀಯ ಯೋಗ ದಿನ: ದೇಶಾದ್ಯಂತ ಗಣ್ಯರ, ಯೋಧರ ಯೋಗ ಪ್ರದರ್ಶನದ ಝಲಕ್​ ಇಲ್ಲಿದೆ…
ಇಂದು ಬೆಳಗ್ಗೆ 9.50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಬೇಕಿತ್ತು. ಆದರೆ, ಈಗ ಬೆಳಗ್ಗೆ 11.30ಕ್ಕೆ ಎಚ್ಎಎಲ್ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ತಮ್ಮ ಪತ್ನಿಯ ಆರೋಗ್ಯವನ್ನು ವಿಚಾರಿಸಿಕೊಂಡು ಆನಂತರ ದೆಹಲಿಗೆ ತೆರಳಲಿದ್ದಾರೆ.
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ನಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು MICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು MICU ನಿಂದ ವಾರ್ಡ್​ಗೆ ಶಿಫ್ಟ್ ಆಗಲಿದ್ದಾರೆ.(ದಿಗ್ವಿಜಯ ನ್ಯೂಸ್​)
ಅಂತಾರಾಷ್ಟ್ರೀಯ ಯೋಗ ದಿನ: ದೇಶಾದ್ಯಂತ ಗಣ್ಯರ, ಯೋಧರ ಯೋಗ ಪ್ರದರ್ಶನದ ಝಲಕ್​ ಇಲ್ಲಿದೆ…

ಅಮೆರಿಕಾದಲ್ಲಿ ಮೋದಿ ಮ್ಯಾಜಿಕ್ ಕಾರಣ ಹಾಗೂ ನಿರೀಕ್ಷೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 4 =
Remember me
