ನವದೆಹಲಿ:ಜನವರಿ 26ರಂದು ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾಲ್ಕು ವಿಚಾರಗಳ ಮೇಲೆ ಕಲಾಕೃತಿಯನ್ನು ಸಲ್ಲಿಸಲಾಗಿದ್ದು, ಎಲ್ಲವೂ ತಿರಸ್ಕೃತಗೊಂಡಿದೆ.
ಕರ್ನಾಟಕವು ಸತತ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸುತ್ತಿದೆ. ಸತತ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. 2023 ರ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.
ರಾಜ್ಯದಲ್ಲಿ@INCKarnatakaಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ@BJP4Indiaಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ…
ಇದನ್ನೂ ಓದಿ:ಪೊಲೀಸರ ಭರ್ಜರಿ ಕಾರ್ಯಾಚರಣೆ; 100 ಕೋಟಿ ಮೌಲ್ಯದ ಡ್ರಗ್ಸ್​, ನಾಲ್ವರು ವಶಕ್ಕೆ
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದಲ್ಲಿರುವ ಬಿಜೆಪಿಗೆ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.
ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
