ಬೆಂಗಳೂರು:ಕರ್ನಾಟಕ ರತ್ನ, ಪವರ್​ಸ್ಟಾರ್​ ಡಾ. ಪುನೀತ್​ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿ ಅವರನ್ನು ನಿಂದಿಸಿ ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ವಿಚಾರ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಕಿಡಿಗೇಡಿ ಮಾಡಿರುವ ಹಲವರು ಖಂಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ…pic.twitter.com/fT48QzaWD5
ಇದನ್ನೂ ಓದಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ತನ್ನ ಕೈ ಬೆರಳನ್ನೇ ದೇವಿಗೆ ಅರ್ಪಿಸಿದ ವ್ಯಕ್ತಿ
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ.
ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ. ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − two =
Remember me
