
ಬೆಂಗಳೂರು:ನಾಲ್ಕು ಅಹಂಕಾರದ ಮಾತುಗಳು ಆಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ತಿಳಿದಿದ್ದರೆ ಅದು ತಮ್ಮ ಭ್ರಮೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.ಸ್ವಾಮಿ ಸಿದ್ದರಾಮಯ್ಯ ಅವರೇ ಎಂದು ಟ್ವೀಟ್ ಪ್ರಾರಂಭಿಸಿರುವ ಅವರು, ನಿಮ್ಮ ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ ಎಂದು ಕುಟುಕಿದ್ದಾರೆ.ನಿಮ್ಮ ರೀತಿಯ ಅಹಂಕಾರದ ಮಾತುಗಳು ನನಗೆ ಬರುವುದಿಲ್ಲ, ಅದು ನನಗೆ ಬೇಡವೂ ಬೇಡ. ಆದರೆ ಜೂ.4ರಂದು ಯಾರು ಯಾರಿಗೆ ದೊಣ್ಣೆ ಕೊಟ್ಟು ಹೊಡಿಸಿಕೊಳ್ಳುತ್ತಾರೆ, ಬಡಿಗೆಯಿಂದ ಹೊಡೆದು ಯಾರು ಯಾರನ್ನ ಕುರ್ಚಿಯಿಂದ ಕೆಳಗಿಳಿಸುತ್ತಾರೆ ನೋಡೋಣ ಎಂದಿದ್ದಾರೆ.ತಾವು ಅಪರೂಪಕ್ಕೆ ತಮ್ಮ ಪ್ರಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದೀರಿ. ಮೊದಲು ಅದಕ್ಕೆ ಅಭಿನಂದನೆಗಳು. ಆದರೆ ಅದರಲ್ಲೂ ಮೈಯೆಲ್ಲಾ ಎಣ್ಣೆ ಸವರಿಕೊಂಡಿರುವಂತೆ ತಮ್ಮ ಕರ್ತವ್ಯದಿಂದ ಜಾರಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೋರಿಸುತ್ತೀರಲ್ಲ ತಮ್ಮ ಭಂಡತನಕ್ಕೆ ಏನು ಹೇಳಬೇಕು ಎಂದು ಕೇಳಿದ್ದಾರೆ.ಪತ್ರಿಕೆಗಳಲ್ಲಿ ಹತ್ತಾರು ಕೋಟಿ ಖರ್ಚು ಮಾಡಿ ಪುಟಗಟ್ಟಲೆ ಜಾಹೀರಾತು ಕೊಡುವಾಗ ಅದು ನಿಮ್ಮ ಯೋಜನೆ. ಹಸಿರು ಬಾವುಟ ತೋರಿಸಿ ಬಸ್ಸಿಗೆ ಚಾಲನೆ ನೀಡುವಾಗ ಅದು ತಮ್ಮ ಸರ್ಕಾರದ ಕೊಡುಗೆ. ಆದರೆ ಅದರಲ್ಲಿ ನ್ಯೂನತೆಗಳು ಕಂಡು ಬದರೆ ಅದು ಕೇಂದ್ರ ಸರ್ಕಾರದ ಹೊಣೆ. ಇದು ಯಾವ ಸೀಮೆ ಆಡಳಿತ ಸ್ವಾಮಿ? ತಮಗೆ ಕರ್ನಾಟಕದ ಜನತೆ ಅಧಿಕಾರ ಕೊಟ್ಟಿರುವುದು ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳಲಿ ಅಂತ ಅಲ್ಲ ಎಂದು ಕಾಲೆಳೆದಿದ್ದಾರೆ.ನಿಮಗೆ ನಿಜವಾಗಿಯೂ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವ ಬದ್ಧತೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಡಬಹುದಿತ್ತಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ತಾವು, ಎಲ್ಲದಕ್ಕೂ ಕೇಂದ್ರ ಮಂತ್ರಿಗಳಿಗೆ ಮನವಿ ಪತ್ರ ಕೊಡುವ ತಾವು ಇದಕ್ಕೆ ಮಾತ್ರ ಯಾಕೆ ಮಾಡಲಿಲ್ಲ. ಅಸಲಿಗೆ ನಾನು ಈ ವಿಷಯ ಪ್ರಸ್ತಾಪ ಮಾಡುವವರೆಗೂ ನಿಮಗೆ ಈ ವಿಷಯ ಗೊತ್ತೇ ಇರಲಿಲ್ಲ. ಇದು ನಿಮ್ಮ ಆಡಳಿತ ವೈಖರಿ ಎಂದಿದ್ದಾರೆ.ಟ್ವೀಟ್ ಕೊನೆಯಲ್ಲಿ ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
