
ಬೆಂಗಳೂರು:ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಬಹಳ ಜೋಷ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇಕೆ ರಾಜೀನಾಮೆ ನೀಡಬೇಕು? ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದರು.
ನನ್ನ ಸಹಿಯೂ ಇಲ್ಲ, ಪತ್ರವೂ ಇಲ್ಲನನ್ನ ವಿರುದ್ಧ ತನಿಖೆ ನಡೆದಿಲ್ಲ.ತನಿಖೆಯಲ್ಲಿ ನನ್ನ ಪಾತ್ರದ ಉಲ್ಲೇಖವಿಲ್ಲ. ನನ್ನ ಪಾತ್ರದ ಬಗ್ಗೆ ಯಾರೂ ಯಾವುದೇ ದಾಖಲೆ ಕೊಟ್ಟಿಲ್ಲ. ನನ್ನ ಸರ್ಕಾರದ ಅವಧಿಯಲ್ಲಿ ನಡೆದ ವಿಚಾರ ಇದಲ್ಲ. ನನ್ನ ಸಹಿ ಎಲ್ಲೂ ಇಲ್ಲ. ನನ್ನಿಂದ ಒಂದೂ ಮನವಿ ಪತ್ರವೂ ಹೋಗಿಲ್ಲ. ಎಲ್ಲವೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವುದು. ನನ್ನ ಪಾತ್ರದ ಬಗ್ಗೆ ಎಲ್ಲೂ, ಯಾರೂ ಹೇಳುತ್ತಿಲ್ಲ. ಯಾವುದೇ ದಾಖಲೆ, ಸಾಕ್ಷ್ಯ, ತನಿಖೆ ಇಲ್ಲದಿದ್ದರೂ ರಾಜ್ಯಪಾಲರು ಕೇಂದ್ರದ ಒತ್ತಡಕ್ಕೆ ಒಳಗಾಗಿ, ತರಾತುರಿಯಲ್ಲಿ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಬಡವರ ಪರ ಇರೋದನ್ನ ಸಹಿಸುತ್ತಿಲ್ಲನಮ್ಮ ಯಶಸ್ವೀ ಗ್ಯಾರಂಟಿ ಯೋಜನೆಗಳನ್ನು ಮೋದಿ ಮತ್ತು ಅಮಿತ್ ಶಾ ಕೂಡ ವಿರೋಧಿಸಿದ್ದರು. ನಮ್ಮ ಸಕಾರ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟಿದ್ದೆವು. ಬಡವರ ಪರ ಇರುವುದನ್ನು ಬಿಜೆಪಿ ಮತ್ತು ಜೆಡಿಎಸ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಕುಟಿಲತನದ ಷಡ್ಯಂತ್ರ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದ ಸುತ್ತೋಲೆಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ 3್ಟ ಖಛಿಠಿಛಿಞಚಿಛ್ಟಿ 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ ಎಂದರೆ ಏನು ಹೇಳುವುದು? ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರವಾಗಿದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + four =
Remember me
