
ಬೆಂಗಳೂರು:ನನ್ನ ಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿ 3 ಎಕರೆ 16 ಗಂಟೆ ಜಮೀನುದ್ದು, ಅದನ್ನು ನನ್ನ ಭಾವಮೈದುನ ನನ್ನ ಪತ್ನಿಗೆ ಅರಿಶಿನ ಕುಂಕಮಕ್ಕಾಗಿ ದಾನವಾಗಿ ಕೊಟ್ಟಿದ್ದಾರೆ. ಆ ಜಮೀನು ಸ್ವಾಧೀನವಾದ ಮೇಲೆ ನಿವೇಶನ ನೀಡಿದ್ದಾರೆ ಎಂದರು.ಜಮೀನು ಕಳೆದುಕೊಂಡವರಿಗೆ 50: 50 ಅನುಪಾತದಲ್ಲಿ ಸೈಟು ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.ನಾನು ಅಧಿಕಾರದಲ್ಲಿದ್ದಾಗ ನಿವೇಶನ ತೆಗೆದುಕೊಳ್ಳಲು ಹೋಗಿಲ್ಲ. ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
