ಮೈಸೂರು:ಲೋಕಸಭೆಯಲ್ಲಿ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಬಜೆಟ್​ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬಜೆಟ್​ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದಿದ್ದರು. ಅವರ ಹೇಳಿಕೆಯ ಬೆನ್ನಲ್ಲೇ ಕೇಂದ್ರ ಬಜೆಟ್​ನಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿಲ್ಲ ಎಂದು ಸಮರ್ಥನೆ ಮಾಡಿಕೊಂಡ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಇದೀಗ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮದುಮಗಳಂತೆ ಸಿಂಗಾರಗೊಂಡ KRS
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಭದ್ರಾ ಯೋಜನೆ ಬಗ್ಗೆ  ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರಾ? ಆಂಧ್ರಪ್ರದೇಶ, ಬಿಹಾರಕ್ಕೆ ವಿಶೇಷ ಅನುದಾನ ಘೋಷಣೆ ಮಾಡಿದರು. ಆದರೆ ರಾಜ್ಯಕ್ಕೆ ಏನು ಕೊಟ್ಟಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಕ್ಷೇತ್ರ ಮಂಡ್ಯಕ್ಕೆ ಕೈಗಾರಿಕೆ ಏನಾದರೂ ಬಂತಾ? ಮೈಸೂರು ಅಥವಾ ಹಾಸನಕ್ಕೆ ಐಐಟಿ ಕೇಳಿದ್ದವು ಕೊಟ್ರಾ? ನಿರ್ಮಲಾ ಸೀತಾರಾಮನ್ ರಾಜ್ಯದಿಂದಲೇ ಆಯ್ಕೆಯಾಗಿದ್ದಾರೆ. ಆದರೂ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ” ಎಂದು ಕಿಡಿಕಾರಿದರು.
ಮುಡಾ, ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿ ಯಾವ ಹಗರಣಗಳು ನಡೆದಿಲ್ವಾ? ಬಿಜೆಪಿ ಅವಧಿಯ 21 ಹಗರಣಗಳನ್ನು ನಾನು ಹೇಳಿದ್ದೇನೆ. ಬಿಜೆಪಿ ಸರ್ಕಾರ ಒಂದು ಕೇಸ್ ಆದ್ರೂ ಸಿಬಿಐಗೆ ಕೊಟ್ರಾ ಎಂದು ಪ್ರಶ್ನಿಸಿದರು.
ಅಂತದ್ದೇನು ಮಾಡಿದ್ದೀನಿ ಅಂತ ನನಗೇ ಗೊತ್ತಿಲ್ಲ… ಫ್ಯಾನ್ಸ್​ಗಳಿಗೆ ರಶ್ಮಿಕಾ ಕೊಟ್ಟ ಪ್ರತಿಕ್ರಿಯೆ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
