ಬೆಂಗಳೂರು: ನಿನ್ನೆ (ಏ.10) ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಯಿತು. ಈ ವೇಳೆ ವಿಜಯಪುರದ ವೇದಾಂತ್​ ಎಂಬ ಯುವಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಹೆತ್ತವರಿಗೆ ಹೆಮ್ಮೆ ತಂದಿದ್ದಾನೆ. ಕೋವಿಡ್​ನಲ್ಲಿ ತಂದೆ ಕಳೆದುಕೊಂಡ ವೇದಾಂತ್​, ತಾಯಿಯ ಆಸೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿದ್ದಾರೆ. ಕ್ಷೌರಿಕನ ಪುತ್ರನ ಅನುಪಮ ಸಾಧನೆಗೆ ರಾಜ್ಯವ್ಯಾಪಿ ಮೆಚ್ಚುಗೆಗೆಳ ಮಹಾಪೂರವೇ ಹರಿದುಬರುತ್ತಿದೆ.
ಇದನ್ನೂ ಓದಿ:ಇಂದು ಆರ್​ಸಿಬಿ-ಮುಂಬೈ ಇಂಡಿಯನ್ಸ್​ ಮುಖಾಮುಖಿ; ಗೆಲುವಿನ ಹಳಿಗೆ ಮರಳುವ ತವಕದಲ್ಲಿ ಪ್ಲೆಸಿಸ್​ ಪಡೆ
ಇನ್ನು ತನ್ನ ಯಶಸ್ಸಿನ ಬಗ್ಗೆ ಮಾತನಾಡಿದ ವೇದಾಂತ್, ಉತ್ತಮ ಫಲಿತಾಂಶದ ಹಿಂದಿದ್ದ ಶ್ರಮ ಕುರಿತಂತೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ವೇಳೆ ಪ್ರಧಾನಿ ಮೋದಿ ಅವರು ರೈತರಿಗೆ ನೀಡುವ ಕಿಸಾನ್ ಸಮ್ಮಾನ್ ಯೋಜನೆ ಮತ್ತು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ನೀಡಿದ ಹಣ ನನ್ನ ವಿದ್ಯಾಭ್ಯಾಸಕ್ಕೆ ಸಹಾಯವಾಯಿತು ಎಂದರು. ಈ ವಿಷಯವನ್ನು ಮುಂದಿಟ್ಟ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ಟೀಕೆಗೆ ತಿರುಗೇಟು ಕೊಟ್ಟಿದ್ದಾರೆ.
“ದ್ವಿತೀಯ ಪಿ.ಯು.ಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ ತನ್ನ ಕುಟುಂಬದ ಹಿನ್ನೆಲೆ ವಿವರಿಸುತ್ತಾ ಬಡತನದಲ್ಲೇ ಶಿಕ್ಷಣ ಪಡೆಯುತ್ತಿರುವ ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂದಿದ್ದನ್ನು ಕೇಳಿ ಖುಷಿಯಾಯಿತು” ಎಂದರು.
ಇದನ್ನೂ ಓದಿ:ಸಿನಿಮಾ ಹಬ್ಬದೌತಣ; ಯುಗಾದಿ ಹಬ್ಬಕ್ಕೆ ಸಾಲು ಸಾಲು ಚಿತ್ರಗಳ ಅಪ್ಡೇಟ್
ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ನನ್ನ ಕನಸಾಗಿತ್ತು. ಗೃಹಲಕ್ಷ್ಮಿ ಆ ಕನಸನ್ನು ಸಾಕಾರಗೊಳಿಸಿದೆ. ನಮ್ಮ ಸರ್ಕಾರದ ಕಾರ್ಯಕ್ರಮವೊಂದು ನಿರೀಕ್ಷೆಗೂ ಮೀರಿದ್ದನ್ನು ಸಾಧಿಸಿದೆ. ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಹೀಗಳೆವ ಮಂದಿಗೆ ಇದು ತಪರಾಕಿ ಬಾರಿಸಿದಂತಿದೆ ಎಂದರು.
ಕುಡಿದದ್ದು ಒಂದೇ ಒಂದು ಎಳನೀರು, ಕೊಟ್ಟಿದ್ದು ಮಾತ್ರ 50,000 ರೂ.! ಶಾಕಿಂಗ್ ವಿಡಿಯೋ ವೈರಲ್

ಕೋವಿಡ್​ನಲ್ಲಿ ತಂದೆ ಕಳೆದುಕೊಂಡ ವೇದಾಂತ್​, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × 2 =
Remember me
