ಬೆಂಗಳೂರು:ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣದ ಮೊದಲ ಅಧ್ಯಾಯ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ ಎಂದು ಕೇಂದ್ರ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:100ಕ್ಕಿಂತ ಹೆಚ್ಚು ಮೊಟ್ಟೆಗಳನ್ನು ಇಡುವ ಹಾರಲಾರದ ಹಕ್ಕಿ ಯಾವುದು ನಿಮಗೆ ಗೊತ್ತಾ?
“ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ, ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ. ನ್ಯಾ.ಎನ್. ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರೆಂದೇ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ?” ಎಂದು ಲೇವಡಿ ಮಾಡಿದರು.
“ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ, ನನ್ನ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಎಚ್.ಡಿ. ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದಿದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು” ಎಂದಿದ್ದಾರೆ.
ಕಳೆದ 34 ದಿನದಿಂದ ಊಟ ಮಾಡಿಲ್ಲ! 1.2 ಕೋಟಿ ರೂ. ಸಾಲವಿದೆ, ಕೈಯಲ್ಲಿ ಕೆಲಸವಿಲ್ಲ: ಕಣ್ಣೀರಿಟ್ಟ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 20 =
Remember me
