ಬೆಂಗಳೂರು: ಶಾಸಕರೊಂದಿಗೆ ಸಮನ್ವಯತೆ ಸಾಧಿಸಲು ಜಿಲ್ಲಾವಾರು ಸರಣಿ ಸಭೆ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಗಾವಿ, ಹಾವೇರಿ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಯ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಚಾರ ಚರ್ಚಿಸಿದರು.ಸೋಮವಾರದ ಸರಣಿ ಸಭೆಯಲ್ಲಿ ಪ್ರಸ್ತಾಪಿಸಿದ ಅಂಶವನ್ನೇ ಪುನಃ ಪ್ರಸ್ತಾಪಿಸಿ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕೆಂದು ಶಾಶಕರನ್ನು ಕೋರಿದರು. ಸರ್ಕಾರ ಮತ್ತು ಸಚಿವರ ವಿರುದ್ಧ ಬಹಿರಂಗ ಹೇಳಿಕೆ ಕೊಡದಂತೆ ಸೂಚಿಸಿದ ಅವರು, ಯಾವುದಾದರೂ ಕೆಲಸ ಆಗದೇ ಇದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಬೇಕು, ಆ ಹಂತದಲ್ಲಿಯೂ ಬೇಡಿಕೆ ಈಡೇರಲಿಲ್ಲ ಎಂದಾದರೆ ನೇರ ತಮ್ಮ ಬಳಿಯೇ ಬನ್ನಿ ಎಂದು ಸೂಚಿಸಿದರು.ಡಿಸಿಎಂ ಸಭೆ:ಬೆಂಗಳೂರು ವ್ಯಾಪ್ತಿಯ ಸಚಿವರು, ಶಾಸಕರ ಜತೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಶಾಸಕರ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಮುಖವಾಗಿ ಕಳೆದ ಸರ್ಕಾರ ತಮಗೆ ತಾರತಮ್ಯ ಮಾಡಿದೆ, ಈಗಲಾದರೂ ನಮ್ಮ ನೆರವಿಗೆ ಬರಬೇಕು ಎಂದು ಹಲವು ಶಾಸಕರು ಗೋಗರೆದಿದ್ದಾರೆ ಎಂದು ಮೂಲಗಳು ತಿಳಿಸಿವೆಸಭೆ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಹಿಂದಿನ ಸರ್ಕಾರದ ಅವಧಿಯಲ್ಲಿ ಆದ ತಾರತಮ್ಯಗಳ ಬಗ್ಗೆ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಆರ್ಥಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಯಾವ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಎಂ.ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ ಸಭೆಯಿಂದ ದೂರ ಉಳಿದಿದ್ದರು. ಉಳಿದಂತೆ ಸಚಿವ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಶರತ್ ಬಚ್ಚೇಗೌಡ, ರಿಜ್ವಾನ್, ಹ್ಯಾರೀಸ್, ಎ.ಸಿ.ಶ್ರೀನಿವಾಸ್, ಶಿವಣ್ಣ, ಶ್ರೀನಿವಾಸ್ ಪಾಲ್ಗೊಂಡಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೂಡ ಸಭೆಯಲ್ಲಿ ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 + eleven =
Remember me
