ಬೆಂಗಳೂರು:“ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿವಾದ ಈಗ ನ್ಯಾಯಾಂಗ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ಧವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ:ನಾಳೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಚಿತ್ರಮಂದಿರಗಳು ತೆರೆಯುವುದಿಲ್ಲ, ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ
“ನೆಲ-ಜಲ-ಭಾಷೆಯ ಹಿತರಕ್ಷಣೆಯ ವಿಷಯ ಬಂದಾಗ ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ನಾವೆಲ್ಲ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು. ಕಾವೇರಿ ನದಿ ನೀರಿನ ವಿವಾದ ಇದೇ ಮೊದಲ ಸಲ ಹುಟ್ಟಿಕೊಂಡದ್ದಲ್ಲ. ದಶಕಗಳ ಕಾಲದಿಂದ ಇದು ನಡೆಯುತ್ತಿದೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಕೂಡಾ ಸತ್ಯ ಮತ್ತು ಸ್ಪಷ್ಟವಾಗಿದೆ. ಈಗ ನನ್ನ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಯಾಕೆ ಇದೇ ಮಾತು ಹೇಳಿಲ್ಲ?” ಎಂದು ಪ್ರಶ್ನಿಸಿದ್ದಾರೆ.
“ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ” ಎಂದು ಹೇಳಿದರು.
ಇದನ್ನೂ ಓದಿ:VIDEO | ನಾವು ರಿಮೋಟ್ ಒತ್ತಿದಾಗ ಬಡವರು ಯೋಜನೆಗಳ ಲಾಭ ಪಡೆಯುತ್ತಾರೆ; ಇದೇ ಬಿಜೆಪಿ ಒತ್ತಿದರೆ…: ರಾಹುಲ್​ ಗಾಂಧಿ
“ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ” ಎಂದು ಸಿಎಂ ಹೇಳಿದರು.
ಯೂಟ್ಯೂಬರ್​ ‘ಮಲ್ಲು ಟ್ರಾವೆಲರ್​’ ವಿರುದ್ಧ ಲುಕ್ ​ಔಟ್​ ನೋಟಿಸ್​ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − sixteen =
Remember me
