ಬೆಂಗಳೂರು:ಇಂದು ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದರು.
ಇದನ್ನೂ ಓದಿ:ಪುಣೆಯಲ್ಲಿ ಹೆಲಿಕಾಪ್ಟರ್​​ ಪತನ; ಅದೃಷ್ಟವಶಾತ್​​ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರು
“ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮ ಗಾಂಧಿಯವರನ್ನು ಕೊಂದರು. ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು” ಎಂದರು.
“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ. ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ” ಎಂದು ಹೇಳಿದರು.
ಇದನ್ನೂ ಓದಿ:ನಿಂತುಕೊಂಡು ನೀರು ಕುಡಿಯುವುದು ಎಷ್ಟು ಡೇಂಜರ್​ ಗೊತ್ತಾ? ಈ ಎಲ್ಲ ಸಮಸ್ಯೆಗಳು ಕಾಡುತ್ತೆ ಎಚ್ಚರ!
“ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈ ಸಮಯದಲ್ಲೇ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆಯಿಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.
ಮನೆಗೆ ಹೋದ್ರೂ ಬಾಸ್​ ಕಾಟ ತಪ್ತಿಲ್ವಾ? ಇಲ್ಲಿನ ಉದ್ಯೋಗಿಗಳಿಗೆ ಸೂಪರ್​​ ಪವರ್​ ಕೊಟ್ಟಿದೆ ಈ ದೇಶ!

ಇದು ನೀವೇನಾ? ಟೀಕೆಗಳ ಬೆನ್ನಲ್ಲೇ ಫೋಟೋ ಡಿಲೀಟ್​! ಗುರುತು ಸಿಗದಷ್ಟು ಬದಲಾಗಿದ್ದಾರೆ ಈ ಸ್ಟಾರ್​ ಬ್ಯೂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 3 =
Remember me
