ಬೆಂಗಳೂರು:ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿದ್ದ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದರು.
ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ, ಆರ್ಥಿಕವಾಗಿ ಮತ್ತು ನಾಗರಿಕವಾಗಿ ಮುನ್ನಡೆಸುವ ಪದವೀಧರರನ್ನು ವಿಶ್ವ ವಿದ್ಯಾಲಯಗಳು ಸಜ್ಜುಗೊಳಿಸಬೇಕು. ಅದನ್ನು ಬಿಟ್ಟು ಕೇವಲ ಮೌಡ್ಯಗಳನ್ನು ತುಂಬಿಕೊಂಡು ಹೊರಗೆ ಬಂದರೆ ಅದರಿಂದ ದೇಶಕ್ಕೂ ಉಪಯೋಗವಿಲ್ಲ. ನಾಡಿಗೂ ಪ್ರಯೋಜನವಿಲ್ಲ. ಪದವೀಧರರ ಭವಿಷ್ಯಕ್ಕೂ ಉಪಯೋಗವಿಲ್ಲ ಎಂದರು.
ಸಭೆಯ ಇತರೆ ಮುಖ್ಯಾಂಶಗಳು
ಕರ್ನಾಟಕ ರಾಜ್ಯದ ನಿವ್ವಳ ನೋಂದಣಿ ಅನುಪಾತ (GER) 36%, ರಾಷ್ಟ್ರೀಯ GER 27.4%, 2030ರ ವೇಳೆಗೆ GER ಶೇ. 50ಕ್ಕೆ ಹೆಚ್ಚಿಸುವ ಗುರಿ ಇದೆ. ಪುರುಷರ GER- 34.8%, ಮಹಿಳೆಯರು- 37.2%, ಪರಿಶಿಷ್ಟ ಜಾತಿ- 25.6%, ಪರಿಶಿಷ್ಟ ಪಂಗಡ- 23.4%, ರಾಜ್ಯದ 32 ಸಾರ್ವಜನಿಕ ವಿವಿಗಳಲ್ಲಿ 1.31 ಲಕ್ಷ ವಿದ್ಯಾರ್ಥಿಗಳು. GER ಪ್ರಮಾಣ ಸರ್ಕಾರಿ ಕಾಲೇಜುಗಳಲ್ಲಿ ಎಷ್ಟು, ಖಾಸಗಿ ಕಾಲೇಜುಗಳಲ್ಲಿ ಎಷ್ಟು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರದ್ದು ಎಷ್ಟು ಎಂದು ಮಾಹಿತಿ ಇಟ್ಟುಕೊಂಡಿರಬೇಕು. ಯುಯುಸಿಎಂಎಸ್‌ ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.
GER ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಾದ ಚಾಮರಾಜನಗರ,ಯಾದಗಿರಿ,ಹಾಸನ, ಕೊಪ್ಪಳ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಮತ್ತು ಸಂಶೋಧನೆಗಳನ್ನು ಹೆಚ್ಚಿಸಬೇಕು. ರಾಜ್ಯದ ಅತ್ಯಂತ ಹಳೆಯ ಮತ್ತು ಮೊದಲ ವಿವಿ ಆಗಿರುವ ಮೈಸೂರು ವಿವಿಯ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಿದ್ದರಾಮಯ್ಯ ಸೂಚಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + 7 =
Remember me
