ಬೆಂಗಳೂರು:ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಘೋಷಿಸಲಾಗಿತ್ತು.
ಈ ಕುರಿತು ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ:ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸಿಎಂಗೆ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
