ಬೆಂಗಳೂರು:ರಾಷ್ಟ್ರಾದ್ಯಂತ ಜಾರಿಯಲ್ಲಿರುವ ಲಾಕ್​ಡೌನ್​ನ ಮೊದಲ ಹಂತ ಮಂಗಳವಾರಕ್ಕೆ (ಏಪ್ರಿಲ್​ 14) ಅಂತ್ಯವಾಗಲಿದೆ. ಈಗಾಗಲೆ ಲಾಕ್​ಡೌನ್​ ಅನ್ನು ಏಪ್ರಿಲ್​ 30ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ 2ನೇ ಹಂತದ ಲಾಕ್​ಡೌನ್​ ಅನ್ನು ಅತ್ಯಂತ ಸ್ಮಾರ್ಟ್​ ಆಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ಆರಂಭಿಸಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ. ಸೋಮವಾರ ಬೆಳಗ್ಗೆ ನಡೆದ ಈ ಸಮಾಲೋಚನೆಯ ವೇಳೆ ಸ್ಮಾರ್ಟ್​ ಲಾಕ್​ಡೌನ್​ ಬಗ್ಗೆ ಖಾಸಗಿ ಸಂಸ್ಥೆಯೊಂದು ಸಿಎಂ ಎದುರು ಪವರ್​ಪಾಯಿಂಟ್​ ಪರ್ಸೆಂಟೇಷನ್​ ನೀಡಿತು.
ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳಲ್ಲದೆ ಡಿಸಿಎಂ ಡಾ. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್​. ಅಶೋಕ್​ ಸೇರಿ ಹಲವು ಸಚಿವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣ, ಸಣ್ಣ ಕೈಗಾರಿಕೆಗಳು, ತಯಾರಿಕಾ ಕ್ಷೇತ್ರಕ್ಕೆ ವಿನಾಯಿತಿ, ಐಟಿ-ಬಿಟಿ ಕಂಪನಿಗಳಿಗೆ ಶೇ.50 ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ಕೊಡುವ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಸಲಹೆಗಳನ್ನು ಆಧರಿಸಿ ಸಭೆಯಲ್ಲಿ ಚಿಂತನಮಂಥನ ನಡೆಸಲಾಗುತ್ತಿದೆ.
ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆ, ಭತ್ತದ ಬೆಳೆ ನಷ್ಟದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 × three =
Remember me
