ಬೆಂಗಳೂರು:ವಿಧಾನಸಭೆ ಸಭಾಂಗಣದಲ್ಲಿ ಅಹೋರಾತ್ರಿ ಧರಣಿಗೆ ಮುಂದಾದ ಜೆಡಿಎಸ್ ಶಾಸಕರ‌ ಮನವೊಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ನಾರಾಯಣ ಗೌಡ ರಾತ್ರಿ ಎಂಟು ಗಂಟೆಗೆ ವಿಧಾನಸೌಧಕ್ಕೆ ದೌಡಾಯಿಸಿದ ಪ್ರಸಂಗ ನಡೆಯಿತು.
ತಮ್ಮ‌ ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾದ ಅನುದಾನ ಕಡಿತ ವಿರೋಧಿಸಿ ಜೆಡಿಎಸ್ ಶಾಸಕರು ಗುರುವಾರ ವಿಧಾನಸಭೆಯಲ್ಲಿ ಕಲಾಪ ಮುಗಿದ ಬಳಿಕವೂ ಸ್ಪೀಕರ್ ಪೀಠದ ಮುಂಭಾಗ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ರೇಪ್​ ಕೇಸ್​ನಲ್ಲಿ ಬೇಲ್​ ಬೇಕೆ? ರಾಖಿ ಕಟ್ಟಿಸಿಕೋ ಎಂದಿದ್ದ ಹೈಕೋರ್ಟ್! ಗರಂ ಆದ ‘ಸುಪ್ರೀಂ’​
ಅನುದಾನ‌ಕಡಿತ ವಿಚಾರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ನೀಡಿದ ಉತ್ತರಕ್ಕೆ ತೃಪ್ತರಾಗದ ಜೆಡಿಎಸ್ ಶಾಸಕರು, ಸಿಎಂ ಸೂಕ್ತ ಉತ್ತರ ನೀಡದಿದ್ದರೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು.
ದಿನದ ಕಲಾಪ ಮುಗಿದ ಬಳಿಕವೂ ಧರಣಿ ನಡೆಸುತ್ತಿರುವ ಮಾಹಿತಿ ಪಡೆದ ಸಿಎಂ ರಾತ್ರಿ ಎಂಟು ಗಂಟೆಗೆ ಮನೆಯಿಂದ ವಿಧಾನಸೌಧಕ್ಕೆ ಆಗಮಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ನಾರಾಯಣಗೌಡರು ಮುಖ್ಯಮಂತ್ರಿಯವರನ್ನು ಅನುಸರಿಸಿದರು.
ಹಣಕಾಸು‌ ಕೊರತೆಯಿಂದ ತಡೆಹಿಡಿಯಲಾದ ಯೋಜನೆಗೆ ಆದ್ಯತೆ ಮೇಲೆ ಅನುದಾನ‌ ಬಿಡುಗಡೆ ಮಾಡುವುದಾಗಿ ಸಿಎಂ‌ ಜೆಡಿಎಸ್ ಶಾಸಕರಿಗೆ ಭರವಸೆ ನೀಡಿದರು.
ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾದ ಜೆಡಿಎಸ್​ ಶಾಸಕರು: ಕಾರಣವೇನು?

ಉಪ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 8 =
Remember me
