ಹುಬ್ಬಳ್ಳಿ: ಕೇವಲ ವಯಸ್ಸಿನ ಕಾರಣದಿಂದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾಣೆ ವಿಚಾರ ಸದ್ಯಕ್ಕೆ ಇಲ್ಲ. ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಬಿಜೆಪಿಯಲ್ಲಿ ಸಮರ್ಥ ನಾಯಕರು ಇಲ್ಲವೆಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ಕಾಂಗ್ರೆಸ್​ನಲ್ಲಿ ಸಮರ್ಥರ ಸಂಖ್ಯೆ ಹೆಚ್ಚು ಇದೆ. ಹೀಗಾಗಿ, ಅವರು ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯಲ್ಲಿ ಸಮರ್ಥರು ಇದ್ದಾರೋ ಅಥವಾ ಇಲ್ಲವೋ ಎನ್ನುವುದಕ್ಕಿಂತ ಈಗಿರುವವರು ಸಮರ್ಥರು ಇದ್ದಾರೋ, ಇಲ್ಲವೋ, ಅವರನ್ನು ಮುಂದುವರಿಸಬೇಕೋ ಅಥವಾ ಬೇಡವೋ ಎಂಬ ಪ್ರಶ್ನೆ ಇದೆ ಎಂದು ಮಾರ್ವಿುಕವಾಗಿ ಹೇಳಿದರು.
ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರೊಂದಿಗೆ ಮಾತುಕತೆ ನಡೆಸಿದ್ದಕ್ಕೆ ಬೇರೆ ಅರ್ಥ ಸೃಷ್ಟಿಸುವ ಅಗತ್ಯವಿಲ್ಲ. ಕೇಂದ್ರ ಸಚಿವನಾಗಿರುವುದರಿಂದ ಹಲವಾರು ಸಚಿವರು, ಮುಖಂಡರು ಭೇಟಿಯಾಗುತ್ತಾರೆ. ಕೇಂದ್ರದಿಂದ ಬರಬೇಕಿರುವ ಸಹಾಯದ ಬಗ್ಗೆ ರ್ಚಚಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
