ಬೆಂಗಳೂರು:ಪಕ್ಷದ ಶಾಸಕರಲ್ಲಿ ಉಂಟಾಗಿರುವ ಅಸಮಾಧಾನ ಶಮನ ಮಾಡುವ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾವಾರು ಶಾಸಕರ ಸಭೆ ಆರಂಭಿಸಿದ್ದಾರೆ. ತಮ್ಮ ನಿವಾಸ ಧವಳಗಿರಿಯಲ್ಲಿ ಪ್ರತಿನಿತ್ಯ ಒಂದು ಅಥವಾ ಎರಡು ಜಿಲ್ಲೆಗಳ ಶಾಸಕರ ಜತೆ ಚರ್ಚೆ ನಡೆಸಿ, ಅಲ್ಲಿಯೇ ಊಟದ ವ್ಯವಸ್ಥೆ ಮಾಡಿದ್ದಾರೆ.
ಅಭಿವೃದ್ಧಿ ಯೋಜನೆಗಳ ಮಂಜೂರು, ಅಧಿಕಾರಿಗಳ ವರ್ಗಾವಣೆ, ಕ್ಷೇತ್ರಕ್ಕೆ ವಿಶೇಷ ಅನುದಾನ ಸಂಬಂಧಿಸಿದಂತೆ ಶಾಸಕರು ಅಸಮಾಧಾನಗೊಂಡಿದ್ದರು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅನೇಕ ಶಾಸಕರು ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿಯೂ ಕೆಲ ಶಾಸಕರು ದೂರಿದ್ದರು. ಆದ್ದರಿಂದಲೇ ಜಿಲ್ಲಾವಾರು ಸಭೆ ನಡೆಸುವಂತೆ ಮುಖ್ಯಮಂತ್ರಿಗೆ ನಡ್ಡಾ ಸೂಚನೆ ನೀಡಿದ್ದರು. ಕಳೆದ ನಾಲ್ಕು ದಿನಗಳಿಂದ ಎಂಟು ಜಿಲ್ಲೆಗಳ ಬಿಜೆಪಿ ಶಾಸಕರೊಂದಿಗೆ ಯಡಿಯೂರಪ್ಪ ಸಭೆ ನಡೆಸಿದ್ದು, ಅಹವಾಲು ಆಲಿಸಿದ್ದಾರೆ.
ಶಾಸಕರಲ್ಲಿ ಬಹುತೇಕರು ಕ್ಷೇತ್ರಗಳಿಗೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೆಲವರು ಮಾತ್ರ ಸಚಿವ ಸ್ಥಾನ ಅಥವಾ ನಿಗಮ-ಮಂಡಳಿಗಳಲ್ಲಿ ಅವಕಾಶ ನೀಡುವಂತೆ ಕೋರಿದ್ದಾರೆ. ಅಧಿಕಾರಿ ಮತ್ತು ನೌಕರರ ವರ್ಗಾವಣೆಯಲ್ಲಿ ಶಾಸಕರ ಮಾತಿಗೆ ಬೆಲೆ ಸಿಗುತ್ತಿಲ್ಲ, ಕೆಲ ಸಚಿವರು ಶಾಸಕರ ಮಾತು ಕೇಳುತ್ತಿಲ್ಲವೆಂದು ನೇರವಾಗಿಯೇ ಸಿಎಂ ಬಳಿ ಅಸಮಾಧಾನ ತೋಡಿಕೊಂಡಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲಾಗದ ಸ್ಥಿತಿ ನಿರ್ವಣವಾಗುತ್ತದೆ ಎಂದು ಕೆಲವರು ನೇರವಾಗಿಯೇ ಹೇಳಿದ್ದಾರೆಂದು ಮೂಲಗಳು ಖಚಿತಪಡಿಸಿವೆ.
ಇಡೀ ವಿಶ್ವದಲ್ಲಿಯೇ ಆರ್ಥಿಕ ಕುಸಿತ ಇದೆ. ದೇಶದಲ್ಲಿಯೂ ಆರ್ಥಿಕ ಪರಿಸ್ಥಿತಿ ಗಂಭೀರವಾಗಿರುವುದರಿಂದ ಯಾವುದೇ ಬೃಹತ್ ಯೋಜನೆಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಕೇಂದ್ರದಿಂದ ಬರುವ ಅನುದಾನ ಕಡಿಮೆಯಾಗಿದೆ. 15ನೇ ಹಣಕಾಸು ಆಯೋಗ ಸಹ ನಮ್ಮ ಪಾಲು ಕಡಿಮೆ ಮಾಡಿದೆ. ಕೇಂದ್ರದ ಮೇಲೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗುತ್ತದೆ. ಆರ್ಥಿಕ ಕುಸಿತ ಕಡಿಮೆಯಾಗುತ್ತಿದ್ದಂತೆ, ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುತ್ತೇನೆ. ಮುಂದಿನ ಸಾರ್ವತ್ರಿಕ ವರ್ಗಾವಣೆ ಸಂದರ್ಭದಲ್ಲಿ ಶಾಸಕರ ಶಿಫಾರಸಿಗೆ ಮಾತ್ರ ಮನ್ನಣೆ ನೀಡುತ್ತೇನೆ. ಸಂಪುಟ ಪುನಾರಚನೆ ಸಂದರ್ಭ ಕೆಲ ಹಿರಿಯರಿಗೆ ಅವಕಾಶ ಸಿಗಲಿದೆ. ಏಪ್ರಿಲ್​ನಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ತುಂಬಿ ವಿಶ್ವಾಸ ಮೂಡಿಸಿದ್ದಾರೆ. ಮುಖ್ಯಮಂತ್ರಿ ಅವರ ವಿಶ್ವಾಸದ ಮಾತುಗಳಿಗೆ ತೃಪ್ತಿ ವ್ಯಕ್ತಪಡಿಸಿರುವ ಶಾಸಕರು, ಯಡಿಯೂರಪ್ಪ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆಂದು ಮೂಲಗಳು ಹೇಳಿವೆ.
ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ದೇಶಿಸಿದ್ದರಾದರೂ, ಕರೊನಾ ಭೀತಿ ಹಿನ್ನೆಲೆ ಮುಂದೂಡುವ ಸಾಧ್ಯತೆಗಳಿವೆ. ಏಪ್ರಿಲ್ 5ಕ್ಕೆ ಸಂಪುಟ ವಿಸ್ತರಣೆ ಮಾಡಿ ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಅವರನ್ನು ಸೇರಿಸಿಕೊಳ್ಳಲು ಸಿದ್ದತೆ ನಡೆದಿದ್ದವು. ಸದ್ಯಕ್ಕೆ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದರಿಂದ ಮುಂದೂಡಲಾಗುತ್ತದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಸಂಪುಟದಲ್ಲಿ ಸದ್ಯಕ್ಕೆ 6 ಸ್ಥಾನಗಳು ಖಾಲಿ ಉಳಿದಿವೆ. ಅದರಲ್ಲಿ ಎರಡನ್ನು ಮಾತ್ರ ಭರ್ತಿ ಮಾಡಿ ಉಳಿದ 4 ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳಲಾಗುತ್ತದೆ.
ಫಿಲಿಪ್ಪೀನ್ಸ್ ಗೃಹ ಬಂಧನದಲ್ಲಿ ವಿದ್ಯಾರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 5 =
Remember me
