ಬೆಂಗಳೂರು:ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್‍ನ 5ನೇ ದಿನದ ಘೋಷಣೆಗಳು, ಕಾರ್ಮಿಕರಿಗೆ ಉದ್ಯೋಗ ಸೃಜನೆ, ಆರೋಗ್ಯ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕೆ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕೇಂದ್ರ ಸರ್ಕಾರದ “ಆತ್ಮ ನಿರ್ಭರ್ ಭಾರತ” ದ ಆಶಯ ಸಾಕಾರಗೊಳಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲೂ ಶ್ರಮಿಸಲಿದೆ ಎಂದು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಆಶ್ವಾಸನೆ ಕೊಟ್ಟಿದ್ದಾರೆ.
“ಟಿ.ವಿ. ಚಾನೆಲ್‍ಗಳನ್ನು ಪ್ರಾರಂಭ ಮಾಡಿ ಮಕ್ಕಳಿಗೆ ಪಾಠ ಹೇಳುವುದು ಒಂದು ಒಳ್ಳೆಯ ನಿರ್ಧಾರ. ಇದರಿಂದ ಶಾಲಾ ದಿನಗಳನ್ನು ಕಳೆದುಕೊಂಡ ಮಕ್ಕಳಿಗೆ ಒಳ್ಳೆಯದಾಗಲಿದೆ. ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆ ಇಲ್ಲಿಯವರೆಗೆ ನಾವು ಅಳವಡಿಸಿಕೊಂಡು ಬಂದ ಔಪಚಾರಿಕ ಪದ್ಧತಿಯ ವಿದ್ಯಾರ್ಜನೆಯ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡುತ್ತದೆ. ಇ-ಎಜುಕೇಷನ್ ಯೋಜನೆ ದೇಶದ ವಿದ್ಯಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದಿದ್ದಾರೆ.
ಇದನ್ನೂ ಓದಿ:ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಸುದ್ದಿಗೋಷ್ಠಿ: ರಾಜ್ಯಗಳ ಸಾಲ ಪಡೆಯುವ ಮಿತಿ ಶೇ. 60ಕ್ಕೆ ಹೆಚ್ಚಳ
ಕೋವಿಡ್-19 ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಔದ್ಯೋಗಿಕ ಘಟಕಗಳು ಮತ್ತು ವ್ಯಕ್ತಿಗಳ ವಿರುದ್ಧ ಆರ್ಥಿಕ ದಿವಾಳಿತನದ ಕಾನೂನಿಗೆ ಒಳಪಡಿಸಲಾಗುವುದಿಲ್ಲ ಎಂಬ ತೀರ್ಮಾನ ಆರ್ಥಿಕ ಸಂಕಷ್ಟದಲ್ಲಿರುವ ಎಂ.ಎಸ್.ಎಂ.ಇ. ಮಾಲೀಕರಿಗೆ ನೆಮ್ಮದಿ ತರಲಿದೆ ಮತ್ತು ಅವರಿಗೆ ಇನ್ನೊಮ್ಮೆ ಆರ್ಥಿಕ ಪುನಃಶ್ಚೇತನಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ.
ಇದನ್ನೂ ಓದಿ:‘ರಾಹುಲ್ ಗಾಂಧಿ ವಲಸೆ ಕಾರ್ಮಿಕರ ಮಕ್ಕಳನ್ನು ಎತ್ತಿಕೊಂಡು, ಅವರೊಂದಿಗೆ ನಡೆದಿದ್ದರೆ ಚೆನ್ನಾಗಿತ್ತು…’
ಎಲ್ಲ ವಲಯಗಳಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಮುಕ್ತವಾಗಿವೆ ಎಂದು ಘೋಷಿಸಿದ್ದು, ಇದು ನಷ್ಟದಲ್ಲಿರುವ ಸರ್ಕಾರಿ ವಲಯದ ಸಂಸ್ಥೆಗಳಿಗೆ ಹೊಸ ಜೀವ ಬಂದಂತಾಗುತ್ತದೆ. ಎಲ್ಲದಕ್ಕೂ ಮಿಗಿಲಾಗಿ ರಾಜ್ಯಗಳ ಸಾಲ ಪಡೆಯುವ ಮಿತಿಯನ್ನು ರಾಜ್ಯ ಜಿಡಿಪಿಯ 3% ರಿಂದ 5% ಕ್ಕೆ ಏರಿಸಿದ್ದು ರಾಜ್ಯಗಳು ಆರ್ಥಿಕವಾಗಿ ಉಸಿರಾಡುವಂತೆ ಮಾಡಿದೆ. ಕೋವಿಡ್-19 ನಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯಗಳು ತಮ್ಮ ಆರ್ಥಿಕ ವ್ಯವಸ್ಥೆಯನ್ನು ಮತ್ತೆ ಪುನಃಶ್ಚೇತನಗೊಳಿಸುವಲ್ಲಿ ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ನಿಯಂತ್ರಣಕ್ಕೆ ಬಾರದ ಕರೊನಾ: ಮೇ 31ರವರೆಗೆ ಲಾಕ್​ಡೌನ್​ ವಿಸ್ತರಣೆಗೆ ನಿರ್ಧಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 15 =
Remember me
