
ಬೆಂಗಳೂರು:ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಆ ಪ್ರಸ್ತಾವ ಇಲ್ಲ ಎಂದರು.ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರಂತೆ 28 ಗೆಲ್ತೀವಿ ಅಂತ ನಾನು ಹೇಳುವುದಿಲ್ಲ. ಆದರೆ, ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗರಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೇಳಿದರು.
ಕರ್ನಾಟಕದವರು ಇಲ್ಲದೇಶದಲ್ಲಿ ಗುಜರಾತ್ ಮಾದರಿಯೇ ಇಲ್ಲ. ಅದು ಸುಳ್ಳು ಎನ್ನುವುದು ಸಾಬೀತಾಗಿದೆ. ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ, ಜಾರಿ ಮಾಡಿದ್ದರಿಂದ ದೇಶದಲ್ಲಿ ಕರ್ನಾಟಕ ಮಾದರಿ ಜಾರಿಯಲ್ಲಿದೆ. ಕೆಂದ್ರದಲ್ಲಿ ಐಘೆಈಐಅ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು ನಮ್ಮ ಕಾರ್ಯಕ್ರಮಗಳ ಜಾರಿ ಆಧಾರದಲ್ಲಿ ಚರ್ಚಿಸಿ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ. ನಾನು ರಾಜ್ಯದ ಆಡಳಿತ ನಡೆಸುತ್ತಿದ್ದೇನೆ. ಈ ರೇಸ್‌ನಲ್ಲಿ ನಮ್ಮ ರಾಜ್ಯದವರು ಯಾರೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಎನ್‌ಡಿಎ ಒಕ್ಕೂಟವಲ್ಲವೇ?ಕಾಂಗ್ರೆಸ್ ಸಣ್ಣ ಪುಟ್ಟ ಪಕ್ಷಗಳ ಜೊತೆ ಒಕ್ಕೂಟ ರಚಿಸಿಕೊಂಡಿದೆ ಎನ್ನುವ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಎನ್‌ಡಿಎ ಕೂಡ ಒಕ್ಕೂಟವೇ ಆಗಿದೆ. ಅವರು ಇತರೆ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ನಾವು ಮಾಡಿಕೊಳ್ಳಬಾರದು ಎಂದರೆ ಹೇಗೆ ಎಂದು ಸಿಎಂ ಪ್ರಶ್ನಿಸಿದರು.
ಕಾನೂನು ಸುವ್ಯವಸ್ಥೆರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಹುಬ್ಬಳ್ಳಿ ಪ್ರಕರಣದಲ್ಲಿ ಕರ್ತವ್ಯಲೋಪ ಮಾಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ. ನೇಹಾ ಕೊಲೆ ಪ್ರಕರಣದ ಆರೋಪಿ ಬಂಧಿತನಾಗಿ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಆಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕೊಲೆಗಳ ಪ್ರಮಾಣ ಕಡಿಮೆ ಆಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಆದರೆ ಅಂಕಿ ಅಂಶಗಳಿಗಿಂತ ಸಮಾಜದ ಸ್ವಾಸ್ಥ್ಯ ಮುಖ್ಯ. ಹೀಗಾಗಿ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟಲು ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಪೆನ್ ಡ್ರೈವ್ ಪ್ರಕರಣ:ಪೆನ್ ಡ್ರೈವ್ ಪ್ರಕರಣ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಹಿಂದೆ ಬಿಜೆಪಿಯ ದೇವರಾಜೇಗೌಡರೇ ಮೊದಲಿಗೆ ಪತ್ರಿಕಾಗೋಷ್ಠಿ ನಡೆಸಿ ವಿಷಯ ತಿಳಿಸಿದ್ದರು. ಅತ್ಯಾಚಾರಕ್ಕೆ ಒಳಗಾದವರು ಆಮೇಲೆ ದೂರು ಕೊಟ್ಟರು. ಆರು ತಿಂಗಳ ಮೊದಲೇ ಈ ವಿಷಯ ಬಿಜೆಪಿಗೆ ಗೊತ್ತಿತ್ತು. ಆದರೂ ಬಿಜೆಪಿ ಪ್ರಜ್ವಲ್ ಗೆ ಟಿಕೆಟ್ ನೀಡಿತು. ಪ್ರಧಾನಿ ಮೋದಿ ಅವರು ಬಂದು ಪ್ರಜ್ವಲ್ ಗೆಲ್ಲಿಸಲು ಭಾಷಣ ಮಾಡಿದರು. ಈ ಪ್ರಕರಣದಲ್ಲಿ ಷಡ್ಯಂತ್ರ ಮಾಡುವುದು ಏನು ಬಂತು? ಎಂದು ಕೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
