ಬೆಂಗಳೂರು:ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳಮೀಸಲು ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತ್ವರಿತವಾಗಿ ಸ್ಪಷ್ಟ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ನಾಡಿನ ಹಿರಿಯ ರಾಜಕಾರಣಿ ದಿವಂಗತ ವೈ.ರಾಮಕೃಷ್ಣರವರ 79ನೇ ಜನ್ಮದಿನದ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆದಿಜಾಂಬವ ಸಾಂಸ್ಕೃತಿಕ ಸಮಿತಿ ಗುರುವಾರ ಏರ್ಪಡಿಸಿದ್ದ ಸಮುದಾಯದ ಐಕ್ಯತಾ ಸಭೆಯಲ್ಲಿ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ನೆರೆಯ ತೆಲಂಗಾಣ ಕಾಂಗ್ರೆಸ್ ಸರ್ಕಾರ ತಕ್ಷಣ ಜಾರಿಗೆ ತರುವುದಾಗಿ ಪ್ರಕಟಿಸಿದೆ. ತೆಲಂಗಾಣ ಸಿಎಂ ರೇವಂತ್‌ರೆಡ್ಡಿ ತೀರ್ಮಾನ ನಮಗೆ ಸ್ಪೂರ್ತಿ, ಸಿಎಂ ಸಿದ್ದರಾಮಯ್ಯ ಕೂಡಲೇ ಕ್ರಮವಹಿಸಲು ಒತ್ತಾಸೆ ನೀಡಲಿದೆ ಎಂದರು.
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲ ಸಮುದಾಯಗಳಿಗೆ ಮೀಸಲು ವಗೀರ್ಕರಣದ ಅವಶ್ಯಕತೆ ಮನವರಿಕೆ ಮಾಡಿಕೊಟ್ಟು, ಒಮ್ಮತ ಮೂಡಿಸಬೇಕಾಗಿದೆ. ಒಳ ಮೀಸಲು ವಿಚಾರದಲ್ಲಿ ಎಲ್ಲದಕ್ಕೂ ಸಿದ್ಧರಾಗಬೇಕು ಎಂದು ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು.
ಎಸ್‌ಸಿ ಒಳ ಮೀಸಲು ಜಾರಿಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಸಮುದಾಯದ ಮುಖಂಡರು ಪಕ್ಷ ಬೇಧ ಮರೆತು ಒಂದಾಗಿ ಪ್ರಯತ್ನ, ಅಗತ್ಯಬಿದ್ದರೆ ಹೋರಾಟ ನಡೆಸುವ ಬಗ್ಗೆ ಚರ್ಚೆಯಾಯಿತು.
ಸುಪ್ರೀಂ ಕೋರ್ಟ್ ತೀರ್ಪು ನೀಡುವ ವೇಳೆ ವ್ಯಕ್ತಪಡಿಸಿದ ಬೇರೆ ಅಭಿಪ್ರಾಯಗಳಿಗೆ ಹೆಚ್ಚಿನ ಒತ್ತು ಕೊಡುವುದು ಬೇಡ. ಮೀಸಲು ವರ್ಗೀಕರಣ ಜಾರಿಯೊಂದೇ ನಮ್ಮ ಗುರಿಯಾಗಬೇಕು ಎಂದು ಸಭೆ ಸಹಮತ ವ್ಯಕ್ತಪಡಿಸಿತು.
ಅಲ್ಲದೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವರಿಕೆ ಮಾಡಿ ಇದನ್ನು ಜಾರಿಗೊಳಿಸಲು ಬದ್ಧವೆಂದು ಸಚಿವ ಮುನಿಯಪ್ಪ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮುಖಂಡರಾದ ಅಂಬಣ್ಣ ಅರೋಲಿಕರ್, ದೊಡ್ಡೇರಿ ವೆಂಕಟೇಶ್, ನಾಗರಾಜು, ಭೀಮಾಶಂಕರ್ ಇನ್ನಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − seven =
Remember me
