ಬೆಂಗಳೂರು: ರಾಜ್ಯ ಸರ್ಕಾರ ಇಂದು ಆಯೋಜಿಸಿದ್ದ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಆಹ್ವಾನಿಸಿದ್ದರೂ ಅವರು ಗೈರುಹಾಜರಾಗಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಜಾತಿ, ಧರ್ಮ, ಪಕ್ಷ, ಪಂಥವನ್ನು ಮೀರಿ ದೇಶದ ಸಂವಿಧಾನಕ್ಕೆ ಗೌರವ ನೀಡಬೇಕಾಗಿರುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಪವಿತ್ರ ಕರ್ತವ್ಯ. ಸಂವಿಧಾನಕ್ಕೆ ಕೊಡುವ ಗೌರವಕ್ಕಿಂತ ಮಿಗಿಲಾದ ದೇಶಪ್ರೇಮ ಬೇರೆ ಇಲ್ಲ ಎಂದು ಪ್ರತಿಪಕ್ಷಗಳನ್ನು ಅವರು ಕುಟುಕಿದ್ದಾರೆ.
ಶುಕ್ರವಾರ ಸರ್ಕಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಿತು. ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಯಾರೂ ಸಹ ಪಾಲ್ಗೊಂಡಿರಲಿಲ್ಲ.
ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ ಸದಸ್ಯರ ಹೆಸರೂ ಸಹ ಆಹ್ವಾನ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಬಹುತೇಕ ಮಂದಿ ಗೈರಾಗಿದ್ದರು. ಇದು ಸಿದ್ದರಾಮಯ್ಯ ಬೇಸರಕ್ಕೆ ಕಾರಣವಾಗಿತ್ತು.ಇದೇ ವೇಳೆ ಜಾಲತಾಣದಲ್ಲಿ ತಮ್ಮ ಅಸಮಾಧಾನವನ್ನು ತೋಡಿಕೊಂಡ ಅವರಿಗೆ ನೆಟ್ಟಿಗರು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ನಿಮ್ಮ ಪಕ್ಷದ ಅಧ್ಯಕ್ಷ ಖರ್ಗೆ ಅವರು ಕೂಡ ಹಾಜರಾಗಿರಲಿಲ್ಲ. ಅದು ಕೂಡ ವಿಷಾಧನೀಯ ಮತ್ತು ಅವರ ದೇಶ ಪ್ರೇಮ ತೋರಿಸುತ್ತದೆ ಅಲ್ಲವವೇ? ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + 6 =
Remember me
