ಬೆಂಗಳೂರು:ಗೋಡ್ಸೆ ಪ್ರತಿಮೆ ಮುಂದೆ ನಿಂತು ಬಿಜೆಪಿಯವರು ಪ್ರತಿಭಟನೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್‌ನವರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಶನಿವಾರ ಮಾತನಾಡಿದ ಅವರು, ಗಾಂಧೀಜಿಯನ್ನು ಹೆಚ್ಚು ದುರ್ಬಳಕೆ ಮಾಡಿಕೊಂಡವರೇ ಕಾಂಗ್ರೆಸ್‌ನವರು. ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ವಿಸರ್ಜಿಸಬೇಕೆಂದು ಗಾಂಧೀಜಿ ಹೇಳಿದ್ದರು. ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲವೆಂಬ ಕಾರಣಕ್ಕೆ ಈ ಸಲಹೆ ನೀಡಿದ್ದರು. ಆದರೆ ಇವರು ಗಾಂಧಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಛೇಡಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಜೀವನ ದುಸ್ತರವಾಗಿದೆ. ಆಡಳಿತದ ಚುಕ್ಕಾಣಿ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಎಲ್ಲ ತರಕಾರಿ ದರಗಳು ಗಗನಮುಖಿಯಾಗಿವೆ ಎಂದು ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದರು.
ಈಗ ಪ್ರತಿ ಲೀಟರ್ ಹಾಲಿನ ದರವನ್ನೂ ಹೆಚ್ಚಿಸಿದ್ದಾರೆ. ಆ.1ರ ನಂತರ ನಿವೇಶನ, ಕಾರು, ಹೊಸಮನೆ ಖರೀದಿ ದರವೂ ಹೆಚ್ಚಳವಾಗಲಿದೆ. ಗ್ಯಾರಂಟಿಗಳನ್ನು ಜಾರಿ ಮಾಡಿರುವುದಾಗಿ ಹೇಳುತ್ತಾ ಜನರಿಗೆ ಬೆಲೆ ಏರಿಕೆ ಬರೆ ಎಳೆದು, ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಟೀಕಿಸಿದರು.
ಪಿಎಸ್‌ಐ ನೇಮಕ ಪರೀಕ್ಷಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದೆ. ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ. ಈ ಹಗರಣವನ್ನು ನಾವೇ ಬಯಲಿಗೆಳೆದು ಸಿಐಡಿ ತನಿಖೆಗೆ ಆದೇಶಿಸಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.
ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಈಗಾಗಲೇ ಪ್ರಕರಣದ ತನಿಖೆ ನಡೆದು ಕೋರ್ಟ್‌ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶಿಸಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
