ಬೆಂಗಳೂರು:ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜು.1ರಿಂದ ಜು.5ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ.
ರಾಜ್ಯಾದ್ಯಂತ ಐದು ದಿನಗಳಲ್ಲಿ 42 ಮಿಮೀ ಮಳೆಯಾಗಬೇಕಿತ್ತು. ಆದರೆ 45 ಮಿಮೀ ಬಿದ್ದಿದ್ದು, ಶೇ.8ರಷ್ಟು ಹೆಚ್ಚಾಗಿ ಸುರಿದಿದೆ. ಒಟ್ಟು 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ವರ್ಷಧಾರೆಯಾದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ ಚಟುವಟಿಕೆಗಳ ಮೇಲೆ ಇನ್ನಷ್ಟು ಪರಿಣಾಮ ಬೀರಿದಂತಾಗಿದೆ.
ಇದನ್ನೂ ಓದಿ:17ರ ಬಾಲಕಿ, ಶಿಕ್ಷಕಿ ನಾಪತ್ತೆ: ಕುಟುಂಬದವರಿಂದ ಮತಾಂತರ ಆರೋಪ
ಕರಾವಳಿ ಭಾಗದಲ್ಲಿ ಬುಧವಾರವೂ ವರುರ್ಣಾಭಟ ಮುಂದುವರಿದಿದ್ದು, ಉಡುಪಿ ಜಿಲ್ಲೆಯಾದ್ಯಂತ ಸರಾಸರಿ 200 ಮಿಮೀ ಅಧಿಕ ಮಳೆ ಸುರಿದಿದೆ. ಉತ್ತರ ಕನ್ನಡದಲ್ಲಿ ಜು.6ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರ ಇಳಿಯದಂತೆ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆ ಕಾಲ ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಇರಲಿದೆ. ದಾವಣಗೆರೆ, ಧಾರವಾಡ, ಗದಗ, ರಾಯಚೂರು, ದಾವಣಗೆರೆಯಲ್ಲಿ ಜು.6ರಂದು ಯೆಲ್ಲೋ ಅಲರ್ಟ್ ಇರಲಿದ್ದು, ಉಳಿದೆಡೆ ಸಾಧಾರಣ ವರ್ಷಧಾರೆಯಾಗಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
