ಬೆಂಗಳೂರು:ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಆರ್​ಆರ್​ ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರು ಚಾಲಕನ ವಿರುದ್ಧ ಬುಧವಾರ ಎಫ್​ಐಆರ್​ ದಾಖಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಎಸ್ಕಾರ್ಟ್ ಹಾಗೂ ಪೈಲೆಟ್ ವಾಹನ ಚಾಲಕ ಮತ್ತು ಕುಸುಮಾ ವಿರುದ್ಧ ಆರ್​ಆರ್​ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ಆರೋಪವೇನು?ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್​ ಅಳವಡಿಸಲಾಗಿತ್ತು. ಬ್ಯಾರಿಕೇಡ್​ ತೆಗೆದು ಕಾರುಗಳನ್ನು ನೂರು ಮೀಟರ್​ ವ್ಯಾಪ್ತಿಯೊಳಗೆ ತೆಗೆದುಕೊಂಡು ಹೋದ ಆರೋಪ ಕೇಳಿಬಂದಿದೆ. ಐಪಿಸಿ ಸೆಕ್ಷನ್​ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ) ಮತ್ತು 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಚಿತ್ರ ಪ್ರಶಸ್ತಿ ಗೆದ್ದ ಬೆಂಗಳೂರು ಬಾಲಕ..!
ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದ ಕುಸುಮಾ, ಇಂದು ಬುಧವಾರ ಬೆಳಗ್ಗೆ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ತಂದೆ ಹನುಮಂತರಾಯಪ್ಪ ಸಾಥ್​ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತಂದೆ ಮತ್ತು ಕುಟುಂಬಸ್ಥರೊಂದಿಗೆ ನಾಗರಬಾವಿ ಬಳಿಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕುಸುಮಾ ಪೂಜೆ ಸಲ್ಲಿಸಿದ್ದರು.(ದಿಗ್ವಿಜಯ ನ್ಯೂಸ್​)
12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
