ಬೆಂಗಳೂರು:ರಾಜ್ಯದಲ್ಲೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಬೆನ್ನಲ್ಲೇ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಗಣನೀಯವಾಗಿ ಕುಸಿತವಾಗಿದ್ದು, ಥಂಡಿ ವಾತಾವರಣ ನಿರ್ಮಾಣವಾಗಿದೆ. ಜತೆಗೆ, ಶೀತ ಗಾಳಿಯೂ ಬೀಸುತ್ತಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆಸುಳಿ ಗಾಳಿ, ತೇವಾಂಶ ಭರಿತ ಮೋಡಗಳಿರುವುದು, ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಬೆಂ.ಗ್ರಾಮಾಂತರ, ಬೆಳಗಾವಿ, ಬೀದರ್​, ಗದಗ, ಹಾಸನ, ಕೊಡಗು, ಮೈಸೂರು, ಬಾಗಲಕೋಟೆ, ಶಿವಮೊಗ್ಗ, ಮಂಡ್ಯ, ದಾವಣಗೆರೆ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸರಾಸರಿ 24ರಿಂದ 28 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುತ್ತಿದೆ. ಜತೆಗೆ, ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿಯೂ 3-4 ಡಿ.ಸೆ. ಉಷ್ಣಾಂಶ ಕುಸಿತವಾಗಿದೆ. ಗರಿಷ್ಠ ತಾಪಮಾನದಲ್ಲಿ ವಿಜಯಪುರದಲ್ಲಿ 32 ಡಿ.ಸೆ. ದಾಖಲಾದರೆ, ಶಿವಮೊಗ್ಗ ಆಗುಂಬೆಯಲ್ಲಿ 23.3 ಡಿ.ಸೆ. ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಮೋಡ ಮುಸುಕಿದ ವಾತಾವರಣ ಇರುವುದರಿಂದ ತಣ್ಣನೆ ಗಾಳಿ ಬೀಸುವ ಜತೆಗೆ ಮಳೆಯೂ ಸುರಿಯುತ್ತಿದೆ.ಈ ಎಲ್ಲ ಕಾರಣಗಳಿಂದ ಹಗಲು, ರಾತ್ರಿ ವೇಳೆ ಜನರಿಗೆ ಥಂಡಿ ಅನುಭವವಾಗುತ್ತಿದ್ದು, ಬೆಚ್ಚಗಿನ ಉಡುಪುಗಳಿಗೆ ಮೊರೆ ಹೋಗಿದ್ದಾರೆ.
ಮಳೆ ಜತೆಗೆ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಶೀತ, ನೆಗಡಿ, ಕೆಮ್ಮು ಮತ್ತು ಜ್ವರ ಕಾಯಿಲೆಗಳು ಜಾಸ್ತಿಯಾಗುತ್ತಿವೆ. ಅನಾರೋಗ್ಯ ಪೀಡಿತರಿಗೆ, ವೃದ್ಧರಿಗೆ, ಚಿಕ್ಕ ಮಕ್ಕಳಿಗೆ ಇಂತಹ ವಾತಾವರಣ ಸಹಿಸುವುದು ಕಷ್ಟವಾಗುತ್ತಿದೆ. ಈ ಬಗ್ಗೆ ಜನರು ಅಗತ್ಯ ಮುನ್ನಚ್ಚರಿಕಾ ಕ್ರಮವಹಿಸಬೇಕು.ದೇಹವನ್ನು ಬೆಚ್ಚಗಿರಿಸಿಕೊಳ್ಳುವ ಜತೆಗೆ ಬಿಸಿ ನೀರು ಅಥವಾ ಕುದಿಸಿ ಆರಿಸಿದ ನೀರು, ಬಿಸಿ, ಶುಚಿಯಾದ ಆಹಾರ ಸೇವಿಸಬೇಕು. ಚೆನ್ನಾಗಿ ಒಣಗಿಸಿದ ಬಟ್ಟೆಯನ್ನು ಮೈ ತುಂಬಾ ಧರಿಸಬೇಕು. ವಾಯುವಿಹಾರ, ವ್ಯಾಯಾಮಕ್ಕೆ ಹೋಗುವವರು ಎಚ್ಚರಿಕೆಯಿಂದ ಇರಬೇಕು. ಉಸಿರಾಟ ಸಮಸ್ಯೆ ಎದುರಿಸುತ್ತಿರುವವರು, ಎಲುಬು, ಕೀಲು ನೋವಿನಿಂದ ಬಳಲುತ್ತಿರುವವರು ಮನೆಯಿಂದ ಹೊರಹೋಗಬಾರದು ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.
ವರುಣಾರ್ಭಟ ಜೋರು:ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಸೋಮವಾರವೂ ಜೋರಾಗಿ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜು.16ರಿಂದ ಜು.18ರವರೆಗೆ ಅತಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ವೇಳೆ 204 ಮಿಮೀ ಮಳೆ ಬೀಳುವ ಸಾಧ್ಯತೆ ಇದೆ. ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ಜತೆಗೆ ಗಾಳಿಯ ವೇಗವೂ ಜಾಸ್ತಿ ಇರಲಿದೆ. ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧಿಸಲಿದೆ. ದಣ ಕನ್ನಡದ ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ, ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಸಮುದ್ರದಲ್ಲಿ 3 ಮೀಟರ್​ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಹಾಸನ, ಕೊಡಗು, ಮೈಸೂರಿನಲ್ಲಿಯೂ ಮುಂದಿನ ಎರಡು ದಿನ ಜೋರು ಮಳೆ ಬೀಳುವುದರಿಂದ ಆರೆಂಜ್​ ಅರ್ಲಟ್​ ಇರಲಿದೆ. ಬೀದರ್​, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಜು.16ರಂದು ಯೆಲ್ಲೋ ಅರ್ಲಟ್​ ಇರಲಿದೆ. ದಕ್ಷಿಣ ಕರ್ನಾಟಕ ಭಾಗದ ಕೆಲವೆಡೆ ಮುಂದಿನ ಮೂರು ದಿನ ಸಾಧಾರಣ ವರ್ಷಧಾರೆಯಾಗಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seven − 1 =
Remember me
