ಕಾಸರಗೋಡು:ಶಾಲಾ ಆವರಣದಲ್ಲಿ ನಡೆಯುತ್ತಿದ್ದ, ವಿಜ್ಞಾನ ಮೇಳಕ್ಕೆಂದು ಹಾಕಿದ್ದ ಪೆಂಡಾಲ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಪರಿಣಾಮ 20ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಜಿಲ್ಲೆಯ ಮಂಜೇಶ್ವರ ತಾಲ್ಲೂಕಿನ ಬೇಕೂರಿನಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ ಆವರಣದಲ್ಲಿ ವಿಜ್ಞಾನ ಮೇಳಕ್ಕೆಂದು ತಗಡಿನ ಶೀಟ್ ಬಳಸಿ, ಪೆಂಡಾಲ್ ಹಾಕಲಾಗಿತ್ತು. ಇದೀಗ ಈ ಪೆಂಡಾಲ್​ ಕುಸಿದು ಬಿದ್ದಿದೆ. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಹಾಗೂ ಕೆಲವು ಶಿಕ್ಷಕರಿಗೆ ಗಾಯಗಳಾಗಿವೆ.
ವಿಜ್ಞಾನ ಮೇಳಕ್ಕೆ ವಿವಿಧ ಶಾಲೆಗಳಿಂದ ಹಲವು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದರು. ಅನಾಹುತ ಸಂಭವಿಸುವಾಗ ನೆರೆದಿದ್ದ ಎಲ್ಲರೂ ಭಯಭೀತರಾಗಿದ್ದರು. ಈ ವೇಳೆ ಸ್ಥಳೀಯರ ಸಹಕಾರದಿಂದ ಶೀಟ್​ಗಳನ್ನು ಸರಿಸಿ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
