ಬಳ್ಳಾರಿ:ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವಾತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ 50 ರೂ. ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:50ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ; 80 ಎಕರೆಯಲ್ಲಿ 1.2 ಮಿಲಿಯನ್ ಸೂರ್ಯಕಾಂತಿ ಹೂ ಬೆಳೆದು ಪತ್ನಿಗೆ ಸರ್‌ಫ್ರೈಸ್ ಕೊಟ್ಟ ರೈತ
ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ 50 ರೂ. ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆ.1ರಂದು ಮಧ್ಯಾಹ್ನ 2ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಇದನ್ನೂ ಓದಿ:Friendship Day: ಫ್ರೆಂಡ್‌ಶಿಪ್ ಬ್ಯಾಂಡ್ ಖರೀದಿಸುತ್ತೀರಾ, ಯಾವ ಬಣ್ಣ ಏನನ್ನು ಸೂಚಿಸುತ್ತದೆ…?
ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ.ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ ನಿರೀಕ್ಷಕ ಬಿ.ವೀರೇಂದ್ರ ಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದರು. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಸರ್ಕಾರದ ಆದೇಶ ಇದ್ದರೂ ಸಹಿತ ಗೃಹಲಕ್ಷ್ಮಿ ಫಲಾನುಭವಿಗಳಿಂದ ಅರ್ಜಿಗೆ ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ. ಹೀಗಾಗಿ ಇವರ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದೂರು ದಾಖಲಿಸಲಾಗಿದೆ.
ಹೊಸ ಉದ್ಯೋಗಿಯನ್ನು ಪರಿಚಯಿಸಿ ‘ಓಲಾ’; ಐಡಿ ಕಾರ್ಡ್ ಪಡೆದ ಮುದ್ದು ನಾಯಿಯ ಫೋಟೋ ವೈರಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
