ಬೆಂಗಳೂರು:ಕಳೆದ 2022ರ ಡಿಸೆಂಬರ್‌ನಲ್ಲಿ ವರ್ಗಾವಣೆಗೊಂಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕರ ವಿವರಗಳನ್ನು ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋಧಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡು ತಿಂಗಳು ಕಳೆದಿದ್ದು, ಬೇರೊಂದು ಕಾಲೇಜಿಗೆ ವರ್ಗಾವಣೆಗೊಂಡು ವರದಿ ಮಾಡಿಕೊಂಡ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸೂಚನೆ ನೀಡಿದೆ.
ಇದನ್ನೂ ಓದಿ:ನಟಿ ಶುಭಾ ಪೂಂಜಾ ಮನೆಯಲ್ಲಿ ನಡೆದ ಅತ್ಯಂತ ನೋವಿನ ಸಂಗತಿ ಬಿಚ್ಚಿಟ್ಟ ಆ್ಯಂಕರ್​ ಅನುಶ್ರೀ!
2022ರ ಡಿಸೆಂಬರ್‌ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಜ.31ರಿಂದ ಅನ್ವಯಿಸುವಂತೆ ಮಾತೃ ಕಾಲೇಜಿನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಫೆ.1ರಿಂದ ವರ್ಗಾವಣೆಗೊಂಡ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಫೆಬ್ರವರಿ ತಿಂಗಳ ವೇತನವನ್ನು ವರ್ಗಾವಣೆಗೊಂಡ ಕಾಲೇಜಿನಿಂದ ಪಡೆಯುವಂತೆ ಸೂಚಿಸಲಾಗಿದೆ.
ಆದರೆ, ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ವರ್ಗಾವಣೆ ಆದೇಶದಲ್ಲಿನ ಹಲವಾರು ಬೋಧಕರು ವರ್ಗಾವಣೆಗೊಂಡ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳದೇ ಇರುವುದನ್ನು ಗಮನಿಸಲಾಗಿದೆ.
ಇದನ್ನೂ ಓದಿ:ನಗರದ ಅಂದಗೆಡಿಸಿದ ಜಾಹೀರಾತು ಫಲಕಗಳು ರಸ್ತೆ ಮಧ್ಯೆ ವಿದ್ಯುತ್ ಕಂಬಗಳಲ್ಲಿ ನೇತಾಡುತ್ತಿವೆ ಬಾಕ್ಸ್‌ಗಳು
ಈ ಹಿನ್ನೆಲೆಯಲ್ಲಿ ಆದೇಶದನ್ವಯ ವರ್ಗಾವಣೆಗೊಂಡಿರುವ ಬೋಧಕರ ವಿವರಗಳನ್ನು ಗೂಗಲ್ ಫಾರ್ಮ್‌ನಲ್ಲಿ ಭರ್ತಿಮಾಡಿ ಸಲ್ಲಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿದೆ. ಈ ಬಗ್ಗೆ ಉದಾಸೀನತೆ ತೋರಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಧರ್ಮಾಧಾರಿತ ರಾಜಕೀಯ ಬಿಟ್ಟು ಬಿಡಿ… ಅಭಿವೃದ್ಧಿ ಕಾರ್ಯಗಳ ಮೇಲೆ ಚರ್ಚೆ ಮಾಡೋಣ ಬನ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
