ಬೆಂಗಳೂರು:ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವಂಥ ಪ್ರಕರಣಗಳು ಮುಂದುವರಿದಿದ್ದು, ಇಂದು ಆ ಪಟ್ಟಿಗೆ ಇನ್ನೊಂದು ಹೆಸರು ಸೇರಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಮತ್ತೆ ಕೇಳಿ ಬರುತ್ತಿರುವ ಹೃದಯಾಘಾತದಿಂದಾದ ಸಾವಿನ ಸುದ್ದಿ ಆತಂಕವನ್ನು ಹೆಚ್ಚಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್ (48) ಸಾವಿಗೀಡಾದ ವ್ಯಕ್ತಿ. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಪರ್ಲಡ್ಕ ನಿವಾಸಿಯಾಗಿರುವ ಮಹೇಶ್​ಗೆ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎದೆನೋವು ಉಂಟಾಗಿತ್ತು.
ಬಳಿಕ ಉಸಿರಾಡುವುದು ಕೂಡ ಕಷ್ಟವಾದಾಗ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಸಾವಿಗೀಡಾಗಿದ್ದನ್ನು, ಪುತ್ತೂರು ಆಸ್ಪತ್ರೆ ವೈದ್ಯರು ಖಚಿತಪಡಿಸಿದರು. ರಾತ್ರಿ ಮಲಗುವಾಗ ಆರೋಗ್ಯವಾಗಿದ್ದ ಇವರು ಬೆಳಗಿನ ಜಾವ ಇದ್ದಕ್ಕಿದ್ದಂತೆ ಅನಾರೋಗ್ಯಗೊಂಡು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವುದು ಅಚ್ಚರಿ ಹಾಗೂ ಆತಂಕವನ್ನು ಮೂಡಿಸಿದೆ.
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?

ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
