
ಬೆಂಗಳೂರು:ಅತಿಥಿ ಉಪನ್ಯಾಸಕರ ಖಾಯಂ ಮಾಡುವ ಪ್ರಸ್ತಾವನೆ ಇಲ್ಲ ಎಂದು ಮೇಲ್ಮನೆಯಲ್ಲಿ ಉನ್ನತ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.ನಿಯಮ 72ರ ಅಡಿ ಸದಸ್ಯ ಆ ದೇವೇಗೌಡರು ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡುವಂತೆ ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿದರು.ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ.ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದ ವರೆಗೂ ವೇತನ ನೀಡಲಾಗುತ್ತಿದೆ.ಆನ್ ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿ ಸಿದ್ದಪಡಿಸಲಾಗಿದೆ ಎಂದು ಹೇಳಿದರು.ಅತಿಥಿ ಉಪನ್ಯಾಸಕರನ್ನ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳಲಾಗುವುದು ಎಂದರು.ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ವಿವರಣೆ ನೀಡಿದರು.
ವೇತನ ತಾರತಮ್ಯ ನಿವಾರಣೆಗೆಕ್ರಮ: ಸಚಿವ ಮಧು ಬಂಗಾರಪ್ಪಪ್ರಾಥಮಿಕ ಶಾಲೆ, ಪ್ರೌಢಶಾಲೆಯಿಂದ ಪದವಿ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವೇತನ ತಾರತಮ್ಯವನ್ನು ನಿವಾರಣೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೇಲ್ಮನೆಯಲ್ಲಿ ತಿಳಿಸಿದರು.ಮರಿತಿಬ್ಬೇಗೌಡ, ಮಧು ಮಾದೇಗೌಡ, ಬೋಜೇಗೌಡ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿ, ಇದಕ್ಕೆ ಅಗತ್ಯವಿರುವ ನಿಯಮಾವಳಿ ತಿದ್ದಪಡಿ ಮಾಡಲು ಮುಖ್ಯಮಂತ್ರಿಗಳ ಸಮ್ಮುಖ ಸಭೆ ನಡೆಸುವುದಾಗಿ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 4 =
Remember me
