ಬೆಂಗಳೂರು:ವಿದ್ಯಾರ್ಥಿಯೊಬ್ಬ ತನ್ನ ಎಕ್ಸಾಂ ದಿನವೇ ಎಂಟನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ಕೆಲವು ತಿಂಗಳ ಹಿಂದೆ ವಿದ್ಯಾರ್ಥಿಯೊಬ್ಬ ತಪ್ಪನ್ನು ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದ ಮಾದರಿಯಲ್ಲೇ ಈ ವಿದ್ಯಾರ್ಥಿಯ ಪ್ರಕರಣ ನಡೆದಿದೆ ಎನ್ನಲಾಗಿದೆ.
ಮೂಲತಃ ಮಂಗಳೂರಿನ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಪಿಇಎಸ್​ ಕಾಲೇಜಿನಲ್ಲಿ ಬಿಟೆಕ್ ಸೆಕೆಂಡ್ ಸೆಮಿಸ್ಟರ್​​ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು ಪರೀಕ್ಷೆ ಕೂಡ ನಡೆಯುತ್ತಿತ್ತು.
ಇದನ್ನೂ ಓದಿ:ಅಪಾರ್ಟ್​ಮೆಂಟ್ ಹತ್ತನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ; ತಪ್ಪು ಮಾಡಿ ಸಿಕ್ಕಿಬಿದ್ದ ಮುಜುಗರ ಎದುರಿಸಲಾಗದೆ ಸಾವಿಗೆ ಶರಣು..
ಇವತ್ತು ಪರೀಕ್ಷೆ ಸಂದರ್ಭದಲ್ಲಿ ಈತ ಕಾಪಿ ಮಾಡಿದ್ದು, ಆ ವಿಷಯ ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬ ಆರೋಪವೂ ಇದೆ. ಆ ಕಾರಣಕ್ಕೆ ಈತ ಎಂಟನೇ ಮಹಡಿಯಿಂದ ಹಾರಿಕೊಂಡಿದ್ದಾನೆ ಎನ್ನಲಾಗಿದೆ ಎಂದು ದಕ್ಷಿಣವಲಯದ ಡಿಸಿಪಿ ಕೃಷ್ಣಕಾಂತ್ ಹೇಳಿದ್ದಾರೆ.
ಇದನ್ನೂ ಓದಿ:ಸ್ಪೆಷಲ್​ ಮಸಾಲೆ ದೋಸೆ ಜತೆ ಸಾಂಬಾರ್ ನೀಡದ್ದಕ್ಕೆ ಹೋಟೆಲ್ ಮಾಲೀಕರಿಗೆ 3,500 ರೂ. ದಂಡ!
ಕಳೆದ ವರ್ಷದ ನವೆಂಬರ್​ನಲ್ಲಿ ಬೆಂಗಳೂರಿನ ಖಾಸಗಿ ಶಾಲೆಯೊಂದರ ಮೊಹಿನ್ ಎಂಬ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದು, ಶಿಕ್ಷಕರು ಆ ತಪ್ಪಿಗಾಗಿ ಹೊರಗೆ ನಿಲ್ಲಿಸಿದ್ದರು ಎಂದು ಮನನೊಂದು, ಹತ್ತನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ.
ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − 1 =
Remember me
