ಆನೇಕಲ್:ಇದನ್ನು ಶುದ್ಧ ತಲೆಹರಟೆ ಎಂದರೂ ತಪ್ಪಾಗದೇ ಇರಬಹುದು. ಏಕೆಂದರೆ ಇಲ್ಲೊಂದಷ್ಟು ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಓವರ್​ ಹೆಡ್​ ಟ್ಯಾಂಕ್​ ಮೇಲೆ ಮೋಜು-ಮಸ್ತಿ ಮಾಡುತ್ತಿದ್ದಾರೆ. ಇದು ಪ್ರತಿದಿನ ನಡೆಯುತ್ತಿದ್ದರೂ ಕಾಲೇಜು ಆಡಳಿತ ಮಂಡಳಿಯಾಗಲಿ, ಪೊಲೀಸರಾಗಲಿ ಈ ಬಗ್ಗೆ ಯಾವುದೇ ಕ್ರಮಕೈಗೊಂಡಂತಿಲ್ಲ.
ಬೆಂಗಳೂರಿನ ಆನೇಕಲ್​ನಲ್ಲಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇಂಥದ್ದೊಂದು ಹುಡುಗಾಟಿಕೆಯಲ್ಲಿ ಕಳೆದ ಕೆಲವು ದಿನಗಳಿಂದ ತೊಡಗಿಸಿಕೊಂಡಿದ್ದಾರೆ. ಪ್ರತಿದಿನ ಇಲ್ಲಿನ ಓವರ್ ಹೆಡ್​​ ಟ್ಯಾಂಕ್ ಮೇಲೆ ಹತ್ತಿ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.
ಗಾಂಜಾ ಹಾಗೂ ಮದ್ಯ ಸೇವಿಸುತ್ತ ಕಾಲ ಕಳೆಯುವ ವಿದ್ಯಾರ್ಥಿಗಳು, ಅಮಲಿನಲ್ಲಿ ವಾಹನ ಚಲಾಯಿಸಿ ಅಪಘಾತಗಳು ಹೆಚ್ಚುತ್ತಿವೆ. ಈ ಮಧ್ಯೆ ಓವರ್ ಹೆಡ್ ಟ್ಯಾಂಕ್ ಮೇಲೆ ಮದ್ಯಪಾನ ಮಾಡಿ ಅದರ ಮತ್ತಿನಲ್ಲಿ ಅಲ್ಲೇ ಪುಂಡಾಟಿಕೆ ತೋರುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸರು ಇತ್ತ ಗಮನ ಹರಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಪ್ರವಾದಿ ಮುಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ; ವಕ್ತಾರರಿಬ್ಬರನ್ನು ಅಮಾನತುಗೊಳಿಸಿದ ಬಿಜೆಪಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 4 =
Remember me
