ಬೆಂಗಳೂರು : ರಾಜ್ಯದಲ್ಲಿ ಏಳೆಂಟು ತಿಂಗಳ ನಂತರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಆರಂಭಕ್ಕೆ ಉನ್ನತ ಶಿಕ್ಷಣ ಇಲಾಖೆ ಪ್ರಾಮಾಣಿತ ಕಾರ್ಯಚರಣಾ ವಿಧಾನ(ಎಸ್‌ಒಪಿ) ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಲೇಜುಗಳು ಸಿದ್ಧತೆಯಲ್ಲಿ ತೊಡಗಿವೆ. ಎಸ್‌ಒಪಿ ಅನುಷ್ಠಾನ ಮಾಡುವುದರ ಬಗ್ಗೆ ಬೋಧಕರು ಮತ್ತು ಬೋಧಕತೇರರ ಜತೆಗೆ ಪ್ರಾಂಶುಪಾಲರು ಮಂಗಳವಾರ ಸಭೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಮತ್ತು ಅಧ್ಯಯನ ಸಾಮಗ್ರಿಗಳನ್ನು ಕಳುಹಿಸುವ ಉದ್ದೇಶದಿಂದ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೊಬೈಲ್ ಮತ್ತು ಇ-ಮೇಲ್ ವಿಳಾಸ ಸಂಗ್ರಹಿಸಲು ಮುಂದಾಗಿದ್ದಾರೆ.
ಮುಚ್ಚಳಿಕೆ ಪತ್ರ: ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕರಿಂದ ಮುಚ್ಚಳಿಕೆ ಪತ್ರಕ್ಕೆ ಸಹಿ ಮಾಡಿಸಿಕೊಂಡು ಬರುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ವಿಭಿನ್ನ ರೀತಿಯ ಮುಚ್ಚಳಿಕೆ ಪತ್ರಗಳು ಬದಲಾಗಿ ಏಕರೂಪದ ಮುಚ್ಚಳಿಕೆ ಪತ್ರವನ್ನು ನೀಡುವ ಉದ್ದೇಶದಿಂದ ವಿವಿ ಮತ್ತು ಕಾಲೇಜುಗಳೇ ಮುಚ್ಚಳಿಕೆ ಪತ್ರ ರೂಪಿಸಿ ವಿದ್ಯಾರ್ಥಿಗಳಿಗೆ ನೀಡಲು ತೀರ್ಮಾನಿಸಿವೆ.
ಕಾರ್ಯಪಡೆ ರಚನೆ: ಕಾಲೇಜು ಹಂತದಲ್ಲಿ ಕರೊನಾ ಮಾರ್ಗಸೂಚಿಗಳನ್ನು ಅನುಸರಿಸುವ ವೇಳೆ ಉದ್ಭವಿಸುವ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕರೊನಾ ಕಾರ್ಯಪಡೆ ರಚಿಸಲು ಸೂಚಿಸಿದ್ದು, ಈ ಪಡೆಗೆ ಬೋಧಕರನ್ನು ಗುರುತಿಸುವ ಕೆಲಸ ಮಂಗಳವಾರ ನಡೆದಿದೆ.
ಶೌಚಗೃಹ, ನೀರು: ಸರ್ಕಾರಿ ಕಾಲೇಜುಗಳಲ್ಲಿ ಶೌಚಗೃಹ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯ ಸಮಸ್ಯೆ ಹೆಚ್ಚಾಗಿರುವುದರಿಂದ ಇದನ್ನು ಸರಿಪಡಿಸಲು ಕಾಲೇಜು ಪ್ರಾಂಶುಪಾಲರು ಮುಂದಾಗಿದ್ದಾರೆ. ಅಲ್ಲದೆ, ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕಾೃನಿಂಗ್ ಉಪಕರಣ ಖರೀದಿಗೂ ಕಾಲೇಜುಗಳು ಅಂದಾಜು ವೆಚ್ಚದ ಮಾಹಿತಿ ಸಂಗ್ರಹಿಸಿವೆ.
ಅಂತಿಮ ವರ್ಷ: ಸದ್ಯಕ್ಕೆ ಅಂತಿಮ ವರ್ಷದ ಪದವಿ ಮತ್ತು ಸ್ನಾಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿ ಹಾಜರಾತಿಗೆ ಅವಕಾಶ ಇರಲಿದೆ. ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತರಗತಿಗೆ ಹಾಜರಾಬೇಕಿದೆ. ನಂತರದ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗೆ ಅವಕಾಶ ನೀಡಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × three =
Remember me
