ನವದೆಹಲಿ:ವಾಣಿಜ್ಯ ಬಳಕೆ ಸಿಲಿಂಡರ್​ ದರವನ್ನು ಇಳಿಕೆ ಮಾಡಲಾಗಿದೆ. ದೆಹಲಿಯಲ್ಲಿ 100 ರೂಪಾಯಿ ಇಳಿಸಿದ್ದರೆ, ಬೇರೆಡೆ ಸುಮಾರು 93 ರೂಪಾಯಿ ಕಡಿತ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್​ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಇದನ್ನೂ ಓದಿ:3 ಕೋಟಿ ರೂ. ಬ್ಯಾಗ್ ಹಿಡಿದು ಫುಟ್​ಬಾಲ್​ ಪಂದ್ಯ ನೋಡಲು ಬಂದ ಖ್ಯಾತ ನಟಿ
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 100 ರೂ.ನಷ್ಟು ಅಗ್ಗವಾಗಿದೆ. ಮಂಗಳವಾರದಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 99.75 ರೂ. ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 99.75 ರೂ. ಕಡಿತವಾಗಿದೆ. ಈ ಹಿನ್ನೆಲೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ 1,680 ರೂ. ಆಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್​ಗಳಿಗೆ ಮಾತ್ರ ಅನ್ವಯವಾಗಲಿದೆ. ವ್ಯಾಪಾರಿ, ಹೋಟೆಲ್​ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ಸಮಾಧಾನ ತಂದಿದೆ ಎಂದು ಹೇಳಬಹುದು.
ಇದನ್ನೂ ಓದಿ:Friendship Day 2023; ಗೆಳತನದ ಮಹತ್ವ ಸಾರುವ ಫ್ರೆಂಡ್‌ಶಿಪ್ ದಿನ‌ದ ವಿಶೇಷತೆ ನಿಮಗೆ ಗೊತ್ತಾ?ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,680 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ 1,802 ರೂಪಾಯಿ, ಮುಂಬೈನಲ್ಲಿ 1,640 ರೂಪಾಯಿ ಮತ್ತು ಚೆನ್ನೈನಲ್ಲಿ 1,852 ರೂಪಾಯಿ ಆಗಿದೆ. ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್​ನಲ್ಲಿ ಸಿಲಿಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲಿಂಡರ್ ಬೆಲೆ 1,103 ರೂಪಾಯಿ ಇದೆ.
ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಪ್ರಾಣ ಬಿಟ್ಟ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
