ಬೆಂಗಳೂರು:ಕರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಅನಿರ್ದಿಷ್ಟ ಅವಧಿಗೆ ಮುಂದೂಡಿದೆ.
ರಾಜ್ಯದ 6025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಗ್ರಾಮ ಪಂಚಾಯಿತಿಗಳ ಅವಧಿ ಇದೇ ಜೂನ್‌ನಿಂದ ಆಗಸ್ಟ್ ಒಳಗೆ ಮುಕ್ತಾಯವಾಗಲಿದೆ. ಕರೊನಾ ನಿಯಮಾವಳಿ ಜಾರಿಯಲ್ಲಿರುವ ಕಾರಣ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿ ಕೊರತೆ, ಸಾರಿಗೆ ವ್ಯವಸ್ಥೆ ಸಮಸ್ಯೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆ ಉಂಟಾಗುವ ಸಾಧ್ಯತೆಗಳು ಕಂಡು ಬಂದ ಕಾರಣ ಚುನಾವಣೆ ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.
ಇದನ್ನೂ ಓದಿಕ್ರಿಶ್ಚಿಯನ್​ಗೆ ಮತಾಂತರಗೊಂಡ ಮುಸ್ಲಿಂ ಯುವತಿಗೆ ತಂದೆಯಿಂದ ಘೋರ ಶಿಕ್ಷೆ…!
ಮತದಾರರ ಪಟ್ಟಿ ತಯಾರಿಕೆ, ಮತದಾನ ಮತ್ತು ಮತಗಳ ಎಣಿಕೆ ದಿನಾಂಕಗಳಂದು ಜನಸಾಮಾನ್ಯರು ಹಾಗೂ ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು, ಪೋಲಿಂಗ್ ಏಜಂಟರು, ರಾಜಕೀಯ ಪಕ್ಷಗಳು, ಸಹಾಯಕ ಸಿಬ್ಬಂದಿಗಳ ಓಡಾಟ ಮತ್ತು ಒಂದು ಕಡೆ ಸೇರಬೇಕಾದ ಸಂದರ್ಭಗಳು ಅನಿವಾರ್ಯವಾಗಿ ಉಂಟಾಗುತ್ತದೆ. ಇದರಿಂದ ವೈರಸ್ ಹರಡುವಿಕೆಗೆ ಅವಕಾಶ ಆಗುತ್ತದೆ ಎಂದು ಆಯೋಗ ಹೇಳಿದೆ. ಬುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ ಬಂದಿದೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆಯೋಗ ಹೇಳಿದೆ.
‘ವೊಡಾಫೋನ್​ ಐಡಿಯಾ’ ಮೇಲೆ ಸರ್ಚಿಂಗ್​ ದೈತ್ಯ ‘ಗೂಗಲ್​​’ ಕಣ್ಣು; ಶೀಘ್ರವೇ ನಿರ್ಧಾರ ಪ್ರಕಟ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twelve =
Remember me
