ಬೆಂಗಳೂರು:ರಾಜ್ಯದಲ್ಲಿರುವ 205 ‘ಎ ಶ್ರೇಣಿ’ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಉದ್ದೇಶಿತ ‘ದೈವ ಸಂಕಲ್ಪ’ ಹಾಗೂ ದೇವಾಲಯಗಳ ಸಮಗ್ರ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್) ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಲೋಕಾರ್ಪಣೆ ಮಾಡಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧಿಸೂಚಿತ ಎ ದರ್ಜೆ ದೇವಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 25 ದೇವಸ್ಥಾನಗಳ ಪುನರುಜ್ಜೀವನಕ್ಕೆ 1,140 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.
ಲಕ್ಷಾಂತರ ಭಕ್ತರು ಆಗಮಿಸುವ ಮಲೈಮಹದೇಶ್ವರಸ್ವಾಮಿ ಬೆಟ್ಟ, ಚಾಮುಂಡಿ ದೇವಸ್ಥಾನ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕಾ, ಯಡಿಯೂರು ಸಿದ್ಧಲಿಂಗೇಶ್ವರ, ಸವದತ್ತಿ ಯಲ್ಲಮ್ಮ ಮುಂತಾದ ಪ್ರಮುಖ ದೇವಸ್ಥಾನಗಳು ಮೊದಲ ಹಂತದಲ್ಲಿ ಸಮಗ್ರವಾಗಿ ಅಭಿವೃದ್ಧಿಯಾಗಲಿವೆ. ಭಕ್ತರಿಗೆ ವಸತಿ, ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪಾರಂಪರಿಕ ಶಿಲಾಮಯ ಕಟ್ಟಡಗಳ ನಿರ್ವಣ, ಬಹುಹಂತದ ವಾಹನಗಳ ನಿಲುಗಡೆ ವ್ಯವಸ್ಥೆ, ಸ್ನಾನಘಟ್ಟ, ಸುಸಜ್ಜಿತ ಅನ್ನದಾಸೋಹ ಭವನ, ಶೌಚಗೃಹ, ಘನತ್ಯಾಜ್ಯ ನಿರ್ವಹಣಾ ಘಟಕ, ಒಳಚರಂಡಿ, ವಾಣಿಜ್ಯ ಸಂಕೀರ್ಣಗಳು ಮುಂತಾದ ಸೌಲಭ್ಯಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತಿದೆ.
ಬೆರಳ ತುದಿಯಲ್ಲೇ ಮಾಹಿತಿ:ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪೌರಾಣಿಕ ಹಿನ್ನೆಲೆ, ಇತಿಹಾಸ, ಚರ-ಸ್ಥಿರಾಸ್ತಿ, ಲಭ್ಯವಿರುವ ಸೇವೆಗಳ/ಪೂಜೆಗಳ ವಿವರ, ಲಭ್ಯವಿರುವ ಸೌಲಭ್ಯಗಳು, ಹತ್ತಿರದ ಸ್ಥಳಗಳು ಇತ್ಯಾದಿ ವಿವರಗಳು ಬೆರಳ ತುದಿಯಲ್ಲೇ ಲಭ್ಯವಾಗಲಿವೆ. ಎನ್​ಐಸಿ ಬೆಂಗಳೂರು ಮತ್ತು ಚೆನ್ನೈ ತಂಡ ರಚಿಸಿರುವ ಅಂತರ್ಜಾಲ ತಾಣ (http://itms.kar.nic.in)ದ ಮೂಲಕ ಈ ಮಾಹಿತಿ ಪಡೆಯಬಹುದು. ಜಗತ್ತಿನ ಯಾವುದೇ ಭಾಗದಿಂದ ಆನ್​ಲೈನ್ ಮೂಲಕ ಕಾಣಿಕೆ ಸಲ್ಲಿಸಬಹುದಾಗಿದೆ. ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್​ಲೈನ್​ನಲ್ಲಿ ಕಾದಿರಿಸುವ ಅವಕಾಶವಿದೆ. ದೇವಾಲಯಗಳ ಸಮಗ್ರ ನಿರ್ವಹಣಾ ವ್ಯವಸ್ಥೆಯ ತಂತ್ರಾಂಶದ ಮುಖೇನ ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರು ಹಾಗೂ ಭಕ್ತರು ಪಡೆಯಲು ಅನುಕೂಲವಾಗುವಂತೆ ಮಾಹಿತಿ ಅಪ್​ಲೋಡ್ ಅಳವಡಿಸಲಾಗಿದೆ. ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳು ಇದರಲ್ಲಿ ಅಡಕವಾಗಿರಲಿವೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ (Bhoomi etc) ಸಂಯೋಜನೆ ಮಾಡಬಹುದಾಗಿದ್ದು, ವಿವಿಧ ರೀತಿಯ ಎಂಐಎಸ್ ವರದಿಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ದೇವಸ್ಥಾನಗಳು ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವ ಕಾರಣ ಅತ್ಯಂತ ಸಮರ್ಪಕ ನಿರ್ವಹಣೆ ಜತೆಗೆ ನಿಯಂತ್ರಣವೂ ಅಗತ್ಯ. ದೇವಾಲಯಗಳ ಆವರಣಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು.
|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
ದೇವಸ್ಥಾನ ಪ್ರವಾಸೋದ್ಯಮ:ರಾಜ್ಯದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಐತಿಹಾಸಿಕ ತಾಣಗಳು, ಸ್ಮಾರಕಗಳು ಮತ್ತು ದೇವಸ್ಥಾನಗಳನ್ನು ಸಂಯೋಜಿಸಿ ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ವಿುಸಬೇಕು. ಅಲ್ಲದೆ, ದೇವಾಲಯಗಳಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್​ಪ್ಲಾ್ಯನ್ ಸಿದ್ಧಪಡಿಸಬೇಕು ಎಂದು ಸೂಚಿಸಿದ ಸಿಎಂ ಬೊಮ್ಮಾಯಿ, ದೇವಸ್ಥಾನಗಳ ಅರ್ಚಕರು ಮತ್ತು ಪೂಜಾರಿಗಳ ಸಮಸ್ಯೆ ಗಳನ್ನು ಬಗೆಹರಿಸಲು ಕ್ರಮವಹಿಸುವ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − five =
Remember me
