ಬೆಂಗಳೂರು:ರಾಜ್ಯದಲ್ಲಿ ಶಾಲೆಗಳನ್ನು ಯಾವಾಗ ಮತ್ತು ಹೇಗೆ ಆರಂಭ ಮಾಡಬೇಕೆಂಬ ಬಗ್ಗೆ ಅಧ್ಯಯನಕ್ಕಾಗಿ ಅಧಿಕಾರಿಗಳ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ಬಂದ ನಂತರ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ಹೇಳಿದರು. ಶೈಕ್ಷಣಿಕ ವರ್ಷ ಕಡಿತವಾದರೆ ಪಠ್ಯಕ್ರಮ ಎಷ್ಟು ಕಡಿತ ಮಾಡಬೇಕು. ಶಾಲೆಗಳಲ್ಲಿ ಸಾಮಾಜಿಕ ಅಂತರ ಪಾಲಿಸಿ ಹೇಗೆ ತರಗತಿ ನಡೆಸಬೇಕು. ಮಕ್ಕಳು ಆಟ ಆಡುವಾಗ, ಪ್ರಾರ್ಥನೆ ಮಾಡುವಾಗ ಸಾಮಾಜಿಕ ಅಂತರ ಹೇಗಿರಬೇಕು ಎಂಬ ಬಗ್ಗೆ ಅಧ್ಯಯನ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ವರದಿ ಬಂದ ಬಳಿಕ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದರೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ವಿವರಿಸಿದರು. ಎಸ್​ಎಸ್ ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಬಗ್ಗೆ ಚರ್ಚೆ ಮಾಡಲು ಸೋಮವಾರ ಸಭೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸುರೇಶ್​ಕುಮಾರ್ ತಿಳಿಸಿದರು.
ಇದನ್ನೂ ಓದಿ:ಕ್ವಾರಂಟೈನ್‌ಗೆ ಹೋಗಲ್ಲ ಅಂದ; ವಿಷ ಸೇವಿಸಿ ಆಸ್ಪತ್ರೆ ಪಾಲಾದ!
ಆನ್​ಲೈನ್ ತರಗತಿಗೆ ವಿರೋಧ:ಕೆಲ ಶಿಕ್ಷಣ ಸಂಸ್ಥೆಗಳು ಹಣದ ಆಸೆಗೆ ಬಿದ್ದು ಎಲ್​ಕೆಜಿ, ಯುಕೆಜಿ ಮಕ್ಕಳಿಗೆ ಆನ್​ಲೈನ್ ತರಗತಿ ನಡೆಸುವುದು ಸರಿಯಲ್ಲ. ಇದಕ್ಕೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಎಳೆಯ ವಯಸ್ಸಿನ ಮಕ್ಕಳಿಗೆ ಆನ್​ಲೈನ್ ತರಗತಿ ಎಂಬುದೇ ಹಾಸ್ಯಾಸ್ಪದ. ಇದೊಂದು ಕ್ರೂರ ಪದ್ಧತಿ. ಎಲ್ಲ ಪೋಷಕರು ಕಂಪ್ಯೂಟರ್ ಖರೀದಿಸಲು ಆಗುತ್ತಾ ಅಥವಾ ಮಕ್ಕಳು ಮೊಬೈಲ್ ಮುಂದೆ ನೋಡುತ್ತಿದ್ದರೆ ಅವರು ಕಣ್ಣಿನ ಮೇಲೆ ಪರಿಣಾಮ ಬೀರುವುದಿಲ್ಲವೇ ಎಂದು ಪ್ರಶ್ನಿಸಿದರು.
ಲಾಕ್​ಡೌನ್​ನಿಂದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿದ್ದು ಶಿಕ್ಷಣ ಹಕ್ಕು ಕಾಯ್ದೆಯಡಿ ಸರ್ಕಾರ ನೀಡಬೇಕಾದ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್​ನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಸದಸ್ಯರು ಪಕ್ಷ ಬೇಧ ಮರೆತು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಸದಸ್ಯರು, ಅನುದಾನ ರಹಿತ ಶಾಲಾ ಶಿಕ್ಷಕರ ನೆರವಿಗೆ ಧಾವಿಸುವಂತೆ ಮನವಿ ಮಾಡಿದರು. ಎರಡು ತಿಂಗಳ ಸಂಬಳ ಇಲ್ಲದೇ ಅನುದಾನ ರಹಿತ ಶಾಲಾ ಶಿಕ್ಷಕರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುತೇಕ ಅನುದಾನ ರಹಿತ ಶಾಲೆಗಳಲ್ಲಿ ಶಿಕ್ಷಕರಿಗೆ ಸಂಬಳ ನೀಡಿಲ್ಲ. ಸಂಬಳ ಕೇಳಿದರೆ ಸರ್ಕಾರದ ಕಡೆ ಆಡಳಿತ ಮಂಡಳಿಗಳು ಬೊಟ್ಟು ಮಾಡುತ್ತಿವೆ. ಆದ್ದರಿಂದ ಆರ್​ಟಿಇ ಹಣ ಬಿಡುಗಡೆ ಮಾಡಿ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
2020-21ನೇ ಸಾಲಿನಲ್ಲಿ ಎರಡು ಶಿಫ್ಟ್​ನಲ್ಲಿ ಶಾಲೆ ಪ್ರಾರಂಭಿಸುವುದು ಚರ್ಚೆಯ ಹಂತದಲ್ಲಿದೆಯೇ ಹೊರತು ಇದೇ ಅಂತಿಮ ಹಾಗೂ ಅಧಿಕೃತ ಆದೇಶವಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರು ಶಿಕ್ಷಣ ಇಲಾಖೆಗೆ ಟಿಪ್ಪಣಿ ನೀಡಿದ್ದಾರೆ. ಇದು ಅಧಿಕಾರಗಳ ಮಟ್ಟದಲ್ಲಿ ನಡೆದ ಚರ್ಚೆಗಾಗಿ ತಯಾರಿಸಿದ ಮಾಹಿತಿಯಾಗಿದೆ. ಇದು ಅಧಿಕೃತ ಆದೇಶ ಅಥವಾ ಸುತ್ತೊಲೆಯಾಗಿರುವುದಿಲ್ಲ. ಈ ಸಂಬಂಧ ಇಲಾಖೆಯಲ್ಲಿ ಈವರೆಗೂ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಕೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಕ್ವಾರಂಟೈನ್​ ಕೇಂದ್ರಗಳಾಗಿ ಬದಲಾದ ಶಾಲೆಗಳು
ಬೆಂಗಳೂರು:ಖಾಸಗಿ ಶಾಲೆಗಳು ಶುಲ್ಕಕ್ಕಾಗಿ ಪೋಷಕರಿಗೆ ಒತ್ತಡ ಹಾಕುವಂತಿಲ್ಲ ಹಾಗೂ ಶುಲ್ಕವನ್ನು ಹೆಚ್ಚಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಎಚ್ಚರಿಸಿದ್ದಾರೆ. ಶನಿವಾರ ಮಾತನಾಡಿ, ಶುಲ್ಕಕ್ಕೆ ಸಂಬಂಧಿಸಿದಂತೆ ಈಗಾಗಲೇ 3 ಸುತ್ತೋಲೆ ಹೊರಡಿಸಲಾಗಿದೆ, ಆದರೆ ಇನ್ನೂ ದೂರು ಬರುತ್ತಿವೆ. ಶುಲ್ಕದ ಹೆಸರಿನಲ್ಲಿ ಬೇರೆ ಬೇರೆ ರೀತಿಯಲ್ಲಿ ಮಕ್ಕಳಿಗೆ, ಪೋಷಕರಿಗೆ ಹಿಂಸೆ ನೀಡುವಂತಿಲ್ಲ. ಅದಕ್ಕಾಗಿಯೇ ಸಹಾಯವಾಣಿ ಸಹ ಆರಂಭಿಸಲಾಗಿದೆ. ಸಹಾಯವಾಣಿಗೆ ದೂರು ಬಂದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಶಾಲೆಗಳನ್ನು ತೆರೆಯಲು ತರಾತುರಿ ಇಲ್ಲ: ಸುರೇಶ್‌ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
