ಹಾವೇರಿ:ದೇಶಕ್ಕೆ ಅವಶ್ಯವಿರುವ ಮೀಸಲಾತಿ ವ್ಯವಸ್ಥೆ ಸರಿಪಡಿಸುವ ಸಂಬಂಧ ತಜ್ಞರ ಸಮಿತಿ ರಚಿಸಲಾಗಿದ್ದು, ಆ ವರದಿ ಬಂದ ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಏನು ಮಾಡಬೇಕೆಂಬುದನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಜನಾಶೀರ್ವಾದ ಯಾತ್ರೆ ಅಂಗವಾಗಿ ಗುರುವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕೆಲ ವರ್ಗದವರು ಒಬಿಸಿಗೆ ಹೆಚ್ಚಿನ ಮೀಸಲಾತಿ ಕೇಳುತ್ತಿದ್ದಾರೆ. ಈಗ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವವರು ಬೇರೆ ರಾಜ್ಯದಲ್ಲಿ ಒಬಿಸಿಯಲ್ಲಿದ್ದರೆ, ಇಲ್ಲಿ ಹಿಂದುಳಿದ ವರ್ಗದಲ್ಲಿರುವವರು ಬೇರೆ ರಾಜ್ಯದಲ್ಲಿ ಎಸ್​ಸಿ, ಎಸ್​ಟಿ ಮೀಸಲಾತಿ ಪಡೆಯುತ್ತಿದ್ದಾರೆ. ಅದಕ್ಕಾಗಿ ದೇಶಕ್ಕೆ ವ್ಯವಸ್ಥಿತ ಮೀಸಲಾತಿ ಅಗತ್ಯವಿದೆ. ತಜ್ಞರ ಸಮಿತಿ ವರದಿ ಬಳಿಕ ಸೂಕ್ತ ಕ್ರಮಕೈಗೊಂಡಲ್ಲಿ ಇಡೀ ದೇಶಕ್ಕೆ ಒಂದೇ ಕಾನೂನು ಆಗುತ್ತದೆ ಎಂದರು.
ಹಿಂದುಳಿದ ವರ್ಗಗಳ ಆಯೋಗದ ವರದಿ ಜಾರಿಗೆ ಕಾಂಗ್ರೆಸ್​ನವರು ಈಗ ಒತ್ತಾಯಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಅವರು ಯಾಕೆ ಮಾಡಲಿಲ್ಲ? ಈ ವಿಷಯವನ್ನು ಸಮಗ್ರ ರಾಷ್ಟ್ರದ ದೃಷ್ಟಿಯಿಂದ ನೋಡಬೇಕಾಗುತ್ತದೆ. ಎಲ್ಲರ ಹಿತದೃಷ್ಟಿಯಿಟ್ಟುಕೊಂಡು ಒಬಿಸಿ ಮಸೂದೆ ಅಂಗೀಕರಿಸಲಾಗಿದೆ. ಹೊಸ ಸಚಿವರನ್ನು ಪರಿಚಯಿಸಿಕೊಡಲು ವಿಪಕ್ಷಗಳು ಸದನದಲ್ಲಿ ಅವಕಾಶ ನೀಡಲಿಲ್ಲ. ಸದನದಲ್ಲಿ ಸಭಾಪತಿ ಮತ್ತು ಸಭಾನಾಯಕರಿಗೆ ಗೌರವ ಕೊಡುವ ಸಂಪ್ರದಾಯವನ್ನೂ ಕಾಂಗ್ರೆಸ್​ನವರು ಮರೆತಿದ್ದಾರೆ ಎಂದು ಟೀಕಿಸಿದರು.
ಜಾತಿಗಣತಿ ಅಗತ್ಯ:1931ರ ನಂತರ ದೇಶದಲ್ಲಿ ಜಾತಿಗಣತಿ ನಡೆದಿಲ್ಲ. ದೇಶಾದ್ಯಂತ ಸಮಗ್ರ ಜಾತಿಗಣತಿ ನಡೆಸಿದರೆ ಸಾಮಾಜಿಕ ನ್ಯಾಯದಡಿ ಹಿಂದುಳಿದ ವರ್ಗ ಸೇರಿ ಎಲ್ಲ ಸಮುದಾಯಕ್ಕೂ ಮೀಸಲಾತಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ನಾರಾಯಣಸ್ವಾಮಿ ಹೇಳಿದರು.
ಪೆಟ್ರೋಲ್ ಬೆಲೆ ಇಳಿಕೆಗೆ ಚಿಂತನೆ:ಎಲೆಕ್ಟ್ರಿಕಲ್ ವಾಹನ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಪೆಟ್ರೋಲ್ ಬೆಲೆ ಇಳಿಕೆ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​, ಏಷ್ಯಾ ಬುಕ್​ ಆಫ್​ ರೆಕಾರ್ಡ್ಸ್​ ಎರಡರಲ್ಲೂ ದಾಖಲೆ ಬರೆದಳು ಕರ್ನಾಟಕದ ಈ ಹುಡುಗಿ, ಅಮನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 1 =
Remember me
