ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ವೇದಿಕೆಯಾಗಿದ್ದ ಕರ್ನಾಟಕದಲ್ಲೇ ಈಗ ಹೊಸ “ಇಂಡಿಯಾ” ಕೂಡ ಉದಯವಾಗಿದೆ. ಈ ಇಂಡಿಯಾಗೆ ಶಕ್ತಿ ತುಂಬಿ ದೇಶವನ್ನು ರಕ್ಷಣೆ ಮಾಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ‌ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಆಯೋಜನೆಗೊಂದ ಸ್ವಾತಂತ್ರ್ಯೋತ್ಸವ ಆಚರಣೆ ಬಳಿಕ ಮಾತನಾಡಿದ ಅವರು ಕೋಮುವಾದಿ ಹಾಗೂ ಸರ್ವಾಧಿಕಾರಿ ಮನಸ್ಥಿತಿ ದೇಶದ ಅಧಿಕಾರದ ಗದ್ದುಗೆಯಲ್ಲಿದೆ. ಈ ದುಷ್ಟಶಕ್ತಿಗಳು ಕೇವಲ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿಲ್ಲ. ಅವರು ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದ್ದಾರೆ ಎಂದರು.ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಬಿತ್ತಲಾಗುತ್ತಿದೆ.ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟೀಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು ಎಂದರು.ಅಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು, ಇಂದು ಕಾಂಗ್ರೆಸ್ ನೇತೃತ್ವದಲ್ಲಿ “ಇಂಡಿಯಾ” ಒಂದಾಗಿದೆ ಎಂದು ಹೇಳಿದರು.ಇಂದು ನಾವು ಬರೀ ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದರೆ ಸಾಲದು. ನಮ್ಮ ದೇಶದ ಸ್ವಾತಂತ್ರ್ಯ ಏನಾಗಿದೆ ಎಂದು ಅರಿಯಬೇಕಿದೆ. ಮಣಿಪುರದಲ್ಲಿ ಮಾರಣ ಹೋಮ, ಹರಿಯಾಣದ ಗಲಭೆ, ಉತ್ತರ ಪ್ರದೇಶದ Lynching… ನೋಡಿದರೆ ನಮ್ಮ ದೇಶದ ಸ್ವಾತಂತ್ರ್ಯ ಏನಾಗಿದೆ? ಅದು ಯಾರ ಕೈಯಲ್ಲಿ ನಲುಗುತ್ತಿದೆ ಎಂದು ತಿಳಿಯುತ್ತದೆ ಎಂದರು.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + ten =
Remember me
