ಶಿವಮೊಗ್ಗ:ಮೇಲಿಂದ ಮೇಲೆ ಕೋಮುಸಂಘರ್ಷದ ಕಾರಣಕ್ಕೆ ಸುದ್ದಿಯಾಗುತ್ತಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕೋಮುಸಂಘರ್ಷ ಪ್ರಕರಣ ನಡೆದಿದೆ. ಎರಡು ಕೋಮುಗಳ ಗುಂಪಿನ ಯುವಕರ ಮಧ್ಯೆ ಗಲಾಟೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಈ ಪ್ರಕರಣ ನಡೆದಿದೆ. ಅದೂ ವಲಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ಈ ಗಲಾಟೆ ನಡೆದಿದೆ. ಪರಿಣಾಮವಾಗಿ, ಶಿರಾಳಕೊಪ್ಪದಲ್ಲಿ ಏಕಾಏಕಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಅಂಗಡಿ-ಮುಂಗಟ್ಟುಗಳೂ ಬಂದ್ ಆಗಿವೆ. ಎರಡು ಕೋಮುಗಳ ನಡುವೆ ಗಲಾಟೆ ಉಂಟಾದ ಹಿನ್ನೆಲೆಯಲ್ಲಿ ಶಿರಾಳಕೊಪ್ಪದ ಅಂಗಡಿ-ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.
ವಲಯಮಟ್ಟದ ಕ್ರೀಡಾಕೂಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ಅಂತ್ಯಗೊಂಡು ಎಲ್ಲರೂ ಅಲ್ಲಿಂದ ಹೋಗುವ ವೇಳೆ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿಯೇ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಾಯಾಳುಗಳನ್ನು ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಇಗದೆ. ಮುಂಜಾಗ್ರತಾ ಕ್ರಮವಾಗಿ ಶಿರಾಳಕೊಪ್ಪ ಪಟ್ಟಣ ಸಂಪೂರ್ಣ ಬಂದ್ ಆಗಿದೆ.
12 ಗಂಟೆಯೊಳಗೆ ವಾಪಸ್​ ಬರುವುದಿದ್ದರೆ ಆ ಪ್ರಯಾಣಕ್ಕೆ ಟೋಲ್​ ಇಲ್ಲ!: ಏನಿದರ ಅಸಲಿಯತ್ತು?

ಈ ಹನ್ನೊಂದು ಊರಲ್ಲಿ 3 ದಿನಗಳಿಂದ ವಿದ್ಯುತ್ ಇಲ್ಲ!; ಕತ್ತಲಲ್ಲೇ ಕಾಲ ಕಳೆಯುತ್ತಿರುವ ಗ್ರಾಮಸ್ಥರು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
