ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಪ್ರಧಾನ ಕಚೇರಿಗೆ ಇಂದು ಭೇಟಿ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು ಕನ್ನಡ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಭಾರಣ ಪ್ರಗತಿ ಪರಿಶೀಲನೆ ನಡೆಸಿದರು.
ಭಾರತೀಯ ಸ್ಟೇಟ್ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಕನ್ನಡ ಅನುಷ್ಠಾನದಲ್ಲಿ ಹಿನ್ನೆಡೆ ಉಂಟಾಗುತ್ತಿರುವುದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ಚೆಕ್, ಚಲನ್‌, ಪಾಸ್‌ಬುಕ್ ಮುದ್ರಣ, ಬ್ಯಾಂಕಿಗೆ ಚೆಕ್ ಒಪ್ಪಿಸುವ ಯಂತ್ರಗಳಲ್ಲಿ ಹಾಗೂ ಕೆಲವು ಎಟಿಎಂ ಕೇಂದ್ರಗಳಲ್ಲಿ ಕನ್ನಡ ಭಾಷೆಯ ಆಯ್ಕೆ ನೀಡದಿರುವ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ನೀಡಿದ್ದಾರೆ ಎಂದು ಅವರು ಬ್ಯಾಂಕ್ ಮುಖ್ಯಸ್ಥರಿಗೆ ತಿಳಿಸಿದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕರ್ನಾಟಕದಲ್ಲಿ ನೆಲೆಸಿರುವ ಕನ್ನಡಿಗರೆಲ್ಲರಿಗೂ ಕನ್ನಡದಲ್ಲಿ ಮಾಹಿತಿ ನೀಡುವುದು, ಸೇವೆ ಒದಗಿಸುವುದು ಎಲ್ಲ ಕಚೇರಿಗಳ ಜವಾಬ್ದಾರಿ. ಕರ್ನಾಟಕದ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯವಹಾರ ನಡೆಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಕನ್ನಡಿಗರಿಗೆ ಕನ್ನಡದಲ್ಲಿಯೇ ಸೇವೆ ಒದಗಿಸಬೇಕು. ಕೇಂದ್ರ ಸರ್ಕಾರದ ಆದೇಶದನ್ವಯ ಬ್ಯಾಂಕುಗಳು ತ್ರಿಭಾಷಾ ಸೂತ್ರದಡಿ ಕಾರ್ಯನಿರ್ವಹಿಸಬೇಕು. ಈ ಹಿನ್ನೆಲೆಯಲ್ಲಿ ಕನ್ನಡವನ್ನು ಪ್ರಥಮ ಸ್ಥಾನದಲ್ಲಿ ಬಳಸಬೇಕು ಎಂದು ಅವರು ಬ್ಯಾಂಕ್​ನವರಿಗೆ ತಾಕೀತು ಮಾಡಿದರು.

ಗ್ರಾಮೀಣ ಭಾಗದಲ್ಲಿರುವ ಎಸ್​ಬಿಐನ ವಿವಿಧ ಶಾಖೆಗಳಲ್ಲಿ ಚಲನ್, ಚೆಕ್‌ಗಳು ಆಂಗ್ಲ ಭಾಷೆಯಲ್ಲಿ ಇರುವುದರಿಂದ ಗ್ರಾಹಕರಿಗೆ ಅನನುಕೂಲವಾಗುತ್ತಿದೆ. ನಾಮಫಲಕ ಮತ್ತು ಸೂಚನಾ ಫಲಕಗಳು ಆಂಗ್ಲ ಭಾಷೆಯಲ್ಲಿರುವ ಬಗ್ಗೆ ಪ್ರಾಧಿಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ಗುರುತಿಸಿ ಸಾರ್ವಜನಿಕರು ದೂರು ನೀಡುತ್ತಿದ್ದಾರೆ. ಈ ಬಗ್ಗೆ ಪ್ರಾಧಿಕಾರದಿಂದ ಭಾರತೀಯ ಸ್ಟೇಟ್ ಬ್ಯಾಂಕಿಗೆ ಬರೆದಿರುವ ಪತ್ರಗಳಿಗೆ ಬ್ಯಾಂಕಿನ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದು ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ಹಿಂದೇಟು ಹಾಗೂ ಸಾರ್ವಜನಿಕ ಸೇವೆಯಲ್ಲಿ ಕನ್ನಡ ಒದಗಿಸದಿರುವ ನಡೆಯಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದ ನಾಗಾಭರಣ, ಕನ್ನಡಿಗ ಗ್ರಾಹಕರಿಗೆ ಕನ್ನಡದಲ್ಲಿ ಸೇವೆ ಒದಗಿಸುವುದು ಬ್ಯಾಂಕಿನ ಜವಾಬ್ದಾರಿ ಎಂದು ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ. ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿಗಳಾದ ಮಹೇಶ್.ಎನ್, ಯುಕೋ ಬ್ಯಾಂಕಿನ ನಿವೃತ್ತ ಅಧಿಕಾರಿ ನಾಗೇಶ್, ಕೆನರಾ ಬ್ಯಾಂಕ್​ ಹಿರಿಯ ವ್ಯವಸ್ಥಾಪಕ ಮುರಳೀಧರ್, ಭಾರತೀಯ ಸ್ಟೇಟ್ ಬ್ಯಾಂಕ್​ನ ಮುಖ್ಯ ಪ್ರಧಾನ ವ್ಯವಸ್ಥಾಪಕ ನಂದಕಿಶೋರ್ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಮಂಡ್ಯ ಹುಡುಗ್ರ ಅಭಿಮಾನ ನೋಡಿ ‘ಓ ಮೈ ಗಾಡ್’ ಎಂದ ಸನ್ನಿ ಲಿಯೋನ್​!; ನಿಮಗಾಗಿ ರಕ್ತದಾನ ಮಾಡುವೆ ಅಂದ್ರು ನಟಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 2 =
Remember me
