ಬೆಂಗಳೂರು:ಬೃಹತ್ ಹಗರಣಗಳ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ, ಮಾಜಿ ಸಚಿವರು, ಶಾಸಕರು ಸೇರಿ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ 10 ದೂರುಗಳು ಸಲ್ಲಿಕೆಯಾಗಿವೆ.
ಬೃಹತ್ ಹಗರಣಗಳ ಸಂಬಂಧ 62 ಗಂಟೆ ಅವಧಿಯ ವಿಡಿಯೊ ತುಣುಕು, 900ಕ್ಕೂ ಹೆಚ್ಚು ಚಿತ್ರಗಳು ಒಳಗೊಂಡ ಎರಡು ಡಿವಿಡಿ ಹಾಗೂ 3,728 ಪುಟಗಳ ದಾಖಲೆಗಳನ್ನು ನೀಡಲಾಗಿದೆ. ಇದೆಲ್ಲವೂ ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಸಿ ಸರ್ಕಾರಿ ಭೂ ಕಬಳಿಸಿರುವ ಪ್ರಕರಣಗಳಾಗಿವೆ. ಈ ಎಲ್ಲ ಹಗರಣಗಳನ್ನು ಸಮಗ್ರ ತನಿಖೆಗಾಗಿ ಸಿಐಡಿ ಅಥವಾ ಹೈಕೋರ್ಟ್‌ನ ನಿವೃತ್ತಿ ನ್ಯಾಯಮೂರ್ತಿಗೆ ವಹಿಸಬೇಕೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್.ಆರ್.ರಮೇಶ್ ಒತ್ತಾಯಿಸಿದ್ದಾರೆ.
2013-2018ರವರೆಗಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿರುವ ಹತ್ತು ಬೃಹತ್ ಹಗರಣಗಳ ಕುರಿತು 3,728 ಪುಟಗಳ ದಾಖಲೆಗಳ ಸಹಿತ ಪ್ರತ್ಯೇಕ ದೂರು ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೆ. ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ. ಖಾದರ್, ಎಂ.ಬಿ.ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ.ಕೃಷ್ಣಪ್ಪ, ಶಾಸಕ ಎನ್.ಎ. ಹ್ಯಾರಿಸ್, ಮಾಜಿ ಶಾಸಕ ಪ್ರಿಯ ಕೃಷ್ಣ, ಐಎಎಸ್ ಅಧಿಕಾರಿಗಳಾದ ಪಾಂಡುರಂಗ ಬಿ.ನಾಯಕ್, ಜಿ.ಸತೀಶ್, ಅತುಲ್ ಕುಮಾರ್ ತಿವಾರಿ, ವಸ್ತ್ರದ್, ವಿ.ಶಂಕರ್, ಮನೋಜ್ ರಾಜನ್, ಡಾ.ಪಿ. ಬೋರೇಗೌಡ, ಡಾ.ಲೀಲಾ ಸಂಪಿಗೆ, ಚಲುವರಾಜು ಮತ್ತು ಕೃಷ್ಣಮೂರ್ತಿ ವಿರುದ್ಧ ಭ್ರಷ್ಟಾಚಾರ ಸಂಬಂಧ ಲೋಕಾಯುಕ್ತದಲ್ಲಿ ದೂರುಗಳನ್ನು ಸಲ್ಲಿಸಿದ್ದೇನೆ ಎಂದರು.
ಸಿದ್ದರಾಮಯ್ಯ, ಕೆ.ಜೆ.ಜಾಜ್, ಪಾಲಿಕೆಯ ಹಣಕಾಸು ವಿಭಾಗದ ಹಿಂದಿನ ಜಂಟಿ ಆಯುಕ್ತ ಮನೋಜ್ ರಾಜನ್ ಸೇರಿ ಇತರ ಅಧಿಕಾರಿಗಳು ಬಿಬಿಎಂಪಿ ವ್ಯಾಪ್ತಿಯ 189 ಇಂದಿರಾ ಕ್ಯಾಂಟೀನ್‌ಗಳ ಗ್ರಾಹಕರ ಹೆಸರಿನಲ್ಲಿ 560 ಕೋಟಿ ರೂ.ಹಗರಣ ನಡೆಸಿದ್ದಾರೆ. ಪಾಲಿಕೆಯಲ್ಲಿ 439 ಬಸ್ ತಂಗುದಾಣಗಳಲ್ಲಿ ಕಾನೂನು ಬಾಹಿರವಾಗಿ ಜಾಹಿರಾತು ಅಳವಡಿಸಿ ಬಿಬಿಎಂಪಿಗೆ ಪಾವತಿಸಬೇಕಾಗಿದ್ದ 68.15 ಕೋಟಿ ರೂ.ಕಟ್ಟದೆ ವಂಚಿಸಿರುವುದು, ಬೀದಿ ದೀಪಗಳ ಅಳವಡಿಕೆ ಯೋಜನೆಯಲ್ಲಿ ಅನರ್ಹ ಸಂಸ್ಥೆಗೆ ಗುತ್ತಿಗೆ ನೀಡುವ ಮೂಲಕ 1,600 ಕೋಟಿ ರೂ.ಲೂಟಿ ಮಾಡಿರುವುದು, ಪಾಲಿಕೆಯಲ್ಲಿ ಆಯ್ದ 200 ಪ್ರಮುಖ ಸ್ಥಳಗಳಲ್ಲಿ ತಲಾ 2ರಂತೆ ಅಂಡರ್ ಗ್ರೌಂಡ್ ಡಸ್ಟ್‌ಬಿನ್‌ಗಳ ಯೋಜನೆಯಲ್ಲಿ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ಸೇರಿ ಇತರ ಅಧಿಕಾರಿಗಳ 40 ಕೋಟಿ ರೂ. ನುಂಗಿ ಹಾಕಿದ್ದಾರೆ ಎಂದು ಎನ್.ಆರ್.ರಮೇಶ್ ವಿವರಿಸಿದರು.
ಎಚ್‌ಐವಿ ಪೀಡಿತರ ಹೆಸರಲ್ಲಿಯೂ ಲೂಟಿ:2014-15 ಮತ್ತು 2015-16ರಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ(ಕೆಎಸ್‌ಎಪಿಎಸ್) ಎಚ್‌ಐವಿ ಪೀಡಿತವರನ್ನು ಸೂಕ್ತ ಚಿಕಿತ್ಸೆ ಮತ್ತು ಔಷಧಕ್ಕೆ ನೀಡಲಾಗುವ ನೂರಾರು ಕೋಟಿ ರೂ. ಹಣವನ್ನು ಗುಳುಂ ಮಾಡಿರುವುದು, 2013-14ರಿಂದ 2016-17ರ ಅವಧಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಭಾಗ್ಯ, ಜ್ಯೋತಿ ಸಂಜೀವಿನಿ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಗಳ ಅನುನಷ್ಠಾನದ ಹೆಸರಿನಲ್ಲಿ ನೂರಾರು ಕೋಟಿ ರೂ.ಲೂಟಿ ಮಾಡಲಾಗಿದೆ. ಈ ಹಗರಣದಲ್ಲಿ ಅಂದಿನ ಆರೋಗ್ಯ ಸಚಿವರಾಗಿದ್ದ ಯು.ಟಿ.ಖಾದರ್, ಕಾರ್ಯಕಾರಿ ನಿರ್ದೇಶಕರಾಗಿದ್ದ ಡಾ.ಪಿ.ಬೋರೇಗೌಡ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧಿಕಾರಿ ಅತುಲ್ ಕುಮಾರ್ ತಿವಾರಿ, ಆಯಕ್ತರಾಗಿದ್ದ ವಸದ್ ಸೇರಿ ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಎನ್.ಆರ್.ರಮೇಶ್ ಮಾಹಿತಿ ನೀಡಿದರು.
ರೈತರ ಹೆಸರಲ್ಲೂ ಕೋಟ್ಯಂತರ ರೂಪಾಯಿ ನುಗ್ಗಿದ ಭ್ರಷ್ಟರು:ಮಳೆ ಆಧಾರಿತ ಕೃಷಿ ಭೂಮಿಗಳಲ್ಲಿ ಕೃಷಿ ಹೊಂಡಗಳ ನಿರ್ಮಿಸಿ ರೈತರಿಗೆ ಸಹಾಯ ಮಾಡುವ ಕೃಷಿ ಭಾಗ್ಯ ಯೋಜನೆ ಹೆಸರಿನಲ್ಲಿ 800 ಕೋಟಿ ರೂ.ಅವ್ಯವಹಾರ ನಡೆದಿದೆ. ಅಂದಿನ ಸಿಎಂ ಸಿದ್ದರಾಮಯ್ಯ, ಸಚಿವ ಕೃಷ್ಣ ಭೈರೇಗೌಡ, ಕೃಷಿ ಇಲಾಖೆ ಆಯುಕ್ತ ಪಾಂಡುರಂಗ ಬಿ.ನಾಯಕ್ ಸೇರಿ ಜಿಲ್ಲಾವಾರು ಉಸ್ತುವಾರಿ ಹೊಂದಿದ್ದ ಜಂಟಿ ನಿರ್ದೇಶಕರು ಭ್ರಷ್ಟಾಚಾರದಲ್ಲಿ ತೊಡಗಿ ಕೋಟ್ಯಂತರ ರೂಪಾಯಿ ನುಂಗಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಸ್ವಚ್ಛ ಭಾರತ ಅಭಿಯಾನ’ ಅನುಷ್ಠಾನದ ಹೆಸರಿನಲ್ಲಿ ಬಿಡುಗಡೆಯಾದ ಅನುದಾನವನ್ನು ಕಾನೂನುಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಶೌಚಗೃಹ, ಜೈವಿಕ ಅನಿಲ ಘಟಕಗಳ ನಿರ್ವಹಣೆ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳ ಸುತ್ತಲಿನ ಪ್ರದೇಶಗಳ ಮೂಲಭೂತ ಸೌಕರ್ಯಗಳ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕಿದ್ದ ಈ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಿಡುಗಡೆ ಮಾಡುವ ಮೂಲಕ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಂದಿನ ಮಾಜಿ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಎಂ.ಕೃಷ್ಣಪ್ಪ, ಜಮೀರ್ ಅಹ್ಮದ್, ಆಗಿನ ಶಾಸಕ ಪ್ರಿಯಾ ಕೃಷ್ಣ, ಹಾಲಿ ಶಾಸಕ ಎನ್. ಎ.ಹ್ಯಾರಿಸ್ ಸೇರಿ ಹಲವು ಅಧಿಕಾರಿಗಳು ಕೋಟ್ಯಂತರ ರೂ. ಲೂಟಿ ಮಾಡಿದ್ದಾರೆ ಎಂದು ಎನ್.ಆರ್ ರಮೇಶ್ ಹಗರಣದ ಬಗ್ಗೆ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟರು.
ನಾಲೆ ನಿರ್ಮಾಣದಲ್ಲೂ ಅವ್ಯವಹಾರ:2.9 ಕಿಮೀ.ಉದ್ದದ ಚಿತ್ರದುರ್ಗ ಶಾಖಾ ನಾಲೆಯ ನಿರ್ಮಾಣ ಕಾಮಗಾರಿಗೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ 2017-18ರಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಅನರ್ಹ ಕಂಪನಿಗೆ 158 ಕೋಟಿ ರೂ.ವೆಚ್ಚದ ಕಾಮಗಾರಿ ನಡೆಸಲು ಗುತ್ತಿಗೆ ನೀಡಲಾಗಿದೆ. ಅಕ್ರಮದಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ನಿಗಮದ ಅಧಿಕಾರಿಗಳಾಗಿದ್ದ ಚೆಲುವರಾಜು ಮತ್ತು ಕೃಷ್ಣಮೂರ್ತಿ ಸೇರಿ ಗುತ್ತಿಗೆದಾರರು ಭಾಗಿಯಾಗಿದ್ದಾರೆ ಎಂದು ಎನ್ ಆರ್ ರಮೇಶ್ ಗಂಭೀರ ಆರೋಪ ಮಾಡಿದರು.
ವಾದ್ರಾ ವಿರುದ್ಧ ಭೂ ಕಬಳಿಕೆ ಗುಣಿಕೆ:ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಪಾಲುದಾರಿಕೆ ಡಿಎಲ್‌ಎ ಸಂಸ್ಥೆ, ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಗಂಗೇನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ ಒಂದರಿಂದ 99, ವರ್ತೂರು ಗ್ರಾಮದ ಸರ್ವೆ ಸಂಖ್ಯೆ 7ರಿಂದ 10, ವರ್ತೂರು ನರಸೀಪುರ ಗ್ರಾಮದ ಸರ್ವೆ ಸಂಖ್ಯೆ 1 ರಿಂದ 35, ಪೆದ್ದನಪಾಳ್ಯ ಗ್ರಾಮದ ಸರ್ವೆ ಸಂಖ್ಯೆ 17ರಿಂದ 20ವರೆಗೆ ಅಂದಾಜು 9,600 ಕೋಟಿ ರೂ.ಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರಿ ಭೂಮಿ ಕಬಳಿಸಿದೆ. ಇದು ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣವಾಗಿದೆ. ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಸಂಸ್ಥೆ ಮುಖ್ಯಸ್ಥರು, ನಿರ್ದೇಶಕರು, ಸದಸ್ಯರು ಪಾಲುದಾರರು, 2013ರಿಂದ 2018ರ ಅವಧಿಯ ಬೆಂಗಳೂರು ನಗರ ಡಿಸಿಯಾಗಿದ್ದ ವಿ.ಶಂಕರ್ ಸೇರಿ ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಸೀಲ್ದಾರ್‌ಗಳು, ಉಪ ತಹಸೀಲ್ದಾರ್, ಕಂದಾಯ ಅಧಿಕಾರಿಗಳು ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ಎನ್.ಆರ್. ರಮೇಶ್ ವಿವರಿಸಿದರು. ಸಿದ್ದರಾಮಯ್ಯ ವಿರುದ್ಧ 7, ಮಾಜಿ ಸಚಿವ ಕೆ.ಜೆ. ಜಾಜ್ ವಿರುದ್ಧ 4, ದೂರುಗಳು, ಯು.ಟಿ. ಖಾದರ್, ಜಮೀರ್ ಅಹ್ಮದ್ ಮತ್ತು ಕೃಷ್ಣ ಭೈರೇಗೌಡ ವಿರುದ್ಧ ತಲಾ 2, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಎಂ.ಕೃಷ್ಣಪ್ಪ, ಎನ್‌ಎ.ಹ್ಯಾರಿಸ್, ಪ್ರಿಯಾ ಕೃಷ್ಣ ವಿರುದ್ಧ ತಲಾ ಒಂದು ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿದ್ದೇನೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
