ಬೆಂಗಳೂರು:ಚೀನಾ ಲೋನ್ ಆ್ಯಪ್ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಕಂಪನಿಗಳು ಮತ್ತು ಐವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಗರದ ವಿಶೇಷ ಪಿಎಂಎಲ್‌ಎ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದೆ. ನ್ಯಾಯಾಲಯ ಚಾರ್ಜ್‌ಶೀಟ್‌ನ್ನು ಪರಿಗಣನೆಗೆ ತೆಗೆದುಕೊಂಡು ವಿಚಾರಣೆಗೆ ಸಮ್ಮತಿಸಿದೆ.
ಆರೋಪಿತ ಕಂಪನಿಗಳಾದ ಮ್ಯಾಡ್ ಎಲಿಫೆಂಟ್ ನೆಟ್‌ವರ್ಕ್ ಟೆಕ್ನಾಲಜಿ ಪ್ರೈ.ಲಿ., ಬ್ಯಾರಿಯೊನಿಕ್ಸ್ ಟೆಕ್ನಾಲಜಿ ಪ್ರೈ. ಲಿ. ಮತ್ತು ಕ್ಲೌಡ್ ಅಟ್ಲಾಸ್ ಫ್ಯೂಚರ್ ಟೆಕ್ನಾಲಜಿ ಪ್ರೈ. ಲಿ ಹಾಗೂ ಜಮ್ನಾದಾಸ್ ಮೊರಾರ್ಜಿ ಫೈನಾನ್ಸ್ ಪ್ರೈ. ಲಿ. ಮತ್ತು ಗೇಟ್‌ವೇ, ರೇಜರ್‌ಪೇ ಸಾಫ್ಟ್‌ವೇರ್ ಪ್ರೈ.ಲಿ. ಕಂಪನಿಗಳು ಸೇರಿದ್ದು, ಈ ಕಂಪನಿಗೆ ಸೇರಿದ 77.25 ಕೋಟಿ ರೂ.ಅನ್ನು ಈಗಾಗಲೇ ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ 10ರೂ. ನೀಡಿದ 60 ವರ್ಷದ ಅಜ್ಜ!
ಸಾರ್ವಜನಿಕರಿಗೆ ಮೊಬೈಲ್ ಆ್ಯಪ್ ಮೂಲಕ ಸಾಲ ಕೊಡುತ್ತಿದ್ದರು. ಆನಂತರ ವಸೂಲಾತಿಗೆ ಏಜೆಂಟ್‌ಗಳನ್ನು ನೇಮಕ ಮಾಡಿಕೊಂಡು ಅವರ ಮೂಲಕ ಗ್ರಾಹಕರಿಗೆ ಹೆಚ್ಚಿನ ಬಡ್ಡಿ ವಸೂಲಿಗೆ ಮಾಡಲು ಕಿರುಕುಳ ಕೊಡಿಸುತ್ತಿದ್ದರು. ಇದರಿಂದ ನೊಂದ ಹಲವು ಗ್ರಾಹಕರು ದೂರು ಸಲ್ಲಿಸಿದ್ದರು. ಇದರ ಮೇರೆಗೆ ಸಿಐಡಿ, ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಇದನ್ನೂ ಓದಿ:100ಕ್ಕೂ ಹೆಚ್ಚು ಬಾರಿ ಇರಿದು ಈತನ ಕಥೆ ಮುಗಿಸಿದ್ರು!
ತನಿಖೆ ವೇಳೆ ಫಿನ್‌ಟೆಕ್ ಕಂಪನಿಗಳು ಡಿಜಿಟಲ್ ಅಪ್ಲಿಕೇಶನ್‌ಗಳ ಮೂಲಕ ಸಾಲಗಳನ್ನು ವಿತರಿಸಿ ಕಾನೂನು ಬಾಹಿರವಾಗಿ ಒಪ್ಪಂದ ಮಾಡಿಕೊಂಡಿರುವುದು ಬೆಳಕಿಗೆ ಬಂದಿವೆ. ಅಲ್ಲದೆ, ಗ್ರಾಹಕರಿಂದ ವಸೂಲಿ ಮಾಡಿದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಈ ಮೂಲಕ ಕಂಪನಿಗಳ ಆರ್‌ಬಿಐ ಕಾನೂನುಗಳನ್ನು ಉಲ್ಲಂಘನೆ ಮಾಡಿರುವುದು ಗೊತ್ತಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೊಮ್ಮಾಯಿ, ಬಿಎಸ್​ವೈ ಹೇಳಿದರೆ ಚುನಾವಣೆಯಲ್ಲಿ ಸ್ಪರ್ಧೆ, ಇಲ್ಲವಾದರೆ ನಾನು ಸ್ಪರ್ಧೆ ಮಾಡಲ್ಲ: ಎಮ್​ಪಿ ರೇಣುಕಾಚಾರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
