ಬೀದರ್​:ಟೂರಿಸ್ಟ್​ ವೀಸಾ ಪಡೆದು ಕಿರ್ಗಿಸ್ತಾನದಿಂದ ಭಾರತಕ್ಕೆ ಬಂದಿದ್ದ 8 ಮಂದಿ ಜಮಾತಿಗಳು ಬೀದರ್​ನಲ್ಲಿ ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ನಗರದ ವಿವಿಧ ಮಸೀದಿಗಳು ಹಾಗೂ ಜಿಲ್ಲೆಯ ಇತರ ಭಾಗಗಳಿಗೆ ತೆರಳಿ ಇವರು ಧರ್ಮಪ್ರಚಾರ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಗಾಂಧಿಗಂಜ್​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ.ವೀಸಾ ನಿಯಮ ಉಲ್ಲಂಘನೆ ಸೇರಿ ವಿವಿಧ ಆರೋಪಗಳಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಮಾರ್ಚ್​ 10ರಂದು ಬೀದರ್​ಗೆ ಬಂದಿರುವ ಇವರೆಲ್ಲರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ನವದೆಹಲಿಯ ನಿಜಾಮುದ್ದೀನ್​ ಮರ್ಕಜ್​ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್​ನಲ್ಲೂ ಪಾಲ್ಗೊಂಡಿದ್ದರು. ಬಳಿಕ ಬೀದರ್​ ನಗರಕ್ಕೆ ಮರಳಿ ಮತ್ತು ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ಸದ್ಯ ಇವರೆಲ್ಲರನ್ನೂ ರಟಕಲಪುರಾ ಮರ್ಕಜ್​ನಲ್ಲಿ ವ್ಯವಸ್ಥೆ ಮಾಡಿರುವ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಂಡ್ಯದಲ್ಲಿ ಐಸೋಲೇಷನ್ ವಾರ್ಡ್​ನಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು 2 ತಾಸಿನಲ್ಲಿ ಪತ್ತೆ ಮಾಡಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − nine =
Remember me
