ತುಮಕೂರು:ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಹೈಕೋರ್ಟ್ ವಕೀಲ ಎಲ್.ರಮೇಶ್ ನಾಯ್ಕ ತುಮಕೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರುನ್ನು (ಪಿಸಿಆರ್) ದಾಖಲಿಸಿದ್ದಾರೆ.
ಸಂಸತ್‌ನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದು ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ‘ಭಯೋತ್ಪಾದಕರು’ ಎಂದು ಕಂಗನಾ ಟ್ವೀಟ್‌ನಲ್ಲಿ ನಿಂದಿಸಿದ್ದು ಲಕ್ಷಾಂತರ ರೈತರಿಗೆ ಅವಮಾನ ಮಾಡಿದ್ದಾರೆ. ಕಂಗನಾ ವಿರುದ್ಧ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪಿಸಿಆರ್ ಕ್ರಿಮಿನಲ್ ದೂರನ್ನು ರಮೇಶ್ ಶುಕ್ರವಾರ ಮಧ್ಯಾಹ್ನ ದಾಖಲಿಸಿದ್ದಾರೆ.
ಕಂಗನಾ ವಿರುದ್ಧ ಕ್ರಮಕೈಗೊಳ್ಳುವಂತೆ ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದ ರಮೇಶ್, ಪೊಲೀಸರು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ಅನುಮತಿಗೆ ಕೋರಿದ್ದರು. ಶುಕ್ರವಾರ ಅನುಮತಿ ದೊರೆತ ಹಿನ್ನೆಲೆಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
