ಶಿವಮೊಗ್ಗ:ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್​ ಮಾಡಿದ್ದಾರೆ ಎಂದು ಆರೋಪಿ ವಾಗ್ಮಿ, ಚಿಂತಕ, ಅಂಕಣಕಾರ, ಬರಹಗಾರರ ಮತ್ತು ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಂಗ್ರೆಸ್​ ಕಾರ್ಯಕರ್ತೆ ಹಾಗೂ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ಎಂಬುವರಿಂದ ದೂರು ದಾಖಲಾಗಿದೆ. ನಿನಗೆ ಎಲ್ಲಿ? ಯಾಕೆ ಉರಿ ಬಂತೋ ಗೊತ್ತಿಲ್ಲ ಎಂದು ಫೇಸ್​ಬುಕ್​ನಲ್ಲಿ ಅವಾಚ್ಯವಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಸೌಗಂಧಿಕಾ ರಘುನಾಥ್ ಆರೋಪ ಮಾಡುತ್ತಿದ್ದಾರೆ.
ಇದನ್ನೂ ಓದಿ:ಕಿಡ್ನಿಗೆ ಯಾವುದೇ ಸಮಸ್ಯೆ ಬರಬಾರದು ಅಂದ್ರೆ ನಿಮ್ಮ ಅಡುಗೆಯಲ್ಲಿ ಈ ಎಣ್ಣೆಯನ್ನು ತಪ್ಪದೇ ಬಳಸಿ…
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ-3 ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿ ಮತ್ತು ಫೋಟೋಗಳನ್ನು ಪೋಸ್ಟ್​ ಮಾಡಿ ಎಂದು ಹೇಳಿದ್ದರು.
ಚಕ್ರವರ್ತಿ ಸೂಲಿಬೆಲೆ ಪೋಸ್ಟಿಗೆ ಸೌಗಂಧಿಕಾ ರಘುನಾಥ್ ಕಾಮೆಂಟ್ ಮಾಡಿ, ದೇವಸ್ಥಾನಕ್ಕೆ ಪೂಜೆ ಮಾಡುವುದು ತಪ್ಪಲ್ಲ ಆದರೆ, ಫೊಟೋ ಹಾಕಿ ಅಂತ ಹೇಳಿರುವುದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದಿದ್ದರು.
ನಾನು ಕಾಮೆಂಟ್ ಮಾಡಿದ ಬಳಿಕ ಸಾಕಷ್ಟು ನಕಲಿ ಖಾತೆಗಳಿಂದ ನನ್ನ ತೇಜೋವಧೆಗೆ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ನಾನು ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ಸ್ವತಃ ಸೂಲಿಬೆಲೆ ಅವರೇ ಕಮೆಂಟ್ ಮಾಡಿ, ನಿನಗೆ ಏನು ಉರಿಯುತ್ತೆ ಎಂದು ಹೇಳಿದ್ದಾರೆ ಎಂದು ಸೌಗಂಧಿಕಾ ಆರೋಪ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ವಿಶ್ವ ಅಥ್ಲೆಟಿಕ್ಸ್​ನಲ್ಲಿ ಇಂದು ನೀರಜ್​ ಚೋಪ್ರಾ ಕಣಕ್ಕೆ; ಸ್ಪರ್ಧೆ ಆರಂಭದ ಸಮಯ ಹೀಗಿದೆ…

ಚೆಸ್​ ವಿಶ್ವಕಪ್​ ರನ್ನರ್​ಅಪ್​ ಪ್ರಜ್ಞಾನಂದ ಗಳಿಸಿದ ಬಹುಮಾನ ಮೊತ್ತವೆಷ್ಟು ಗೊತ್ತೇ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + fourteen =
Remember me
